ತಮಿಳುನಾಡಿನಲ್ಲಿ ಸ್ಥಿರ ಸರ್ಕಾರ ರಚನೆಗೆ ಇರುವ ಬಹುದೊಡ್ಡ ಅಡ್ಡಿ ಪ್ರಧಾನಿ ಮೋದಿ: ಕಾಂಗ್ರೆಸ್ ಆರೋಪ
ತಮಿಳುನಾಡಿನಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ...
ನವದೆಹಲಿ: ತಮಿಳುನಾಡಿನಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಆರೋಪ ಮಾಡಿರುವ ಕಾಂಗ್ರೆಸ್, ರಾಜ್ಯದಲ್ಲಿ ಸ್ಥಿರ ಸರ್ಕಾರ ರಚಿಸಲು ಇರುವ ಅತ್ಯಂತ ದೊಡ್ಡ ತಡೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಆಡಳಿತ ಎಂದು ಹೇಳಿದೆ.
ತಮಿಳುನಾಡಿನ ಜನತೆಗೆ ಸ್ಥಿರ ಸರ್ಕಾರ ಬೇಕು , ಅವರಿಗೆ ಸದ್ಯದಲ್ಲಿಯೇ ನಾಗರಿಕ ಸೇವೆಗಳನ್ನು ಒದಗಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೆವಾಲಾ ತಿಳಿಸಿದರು.
ತಮಿಳುನಾಡಿನಲ್ಲಿ ಸ್ಥಿರ ಸರ್ಕಾರ ರಚನೆಗೆ ಪ್ರಮುಖ ತಡೆಯಾಗಿರುವುದು ಬಿಜೆಪಿ ಮತ್ತು ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎಂದು ಸುದ್ದಿ ಸಂಸ್ಥೆಯೊಂದಿಗೆ ಮಾತನಾಡುತ್ತಾ ಆರೋಪಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.