ಮನೋಹರ್ ಪರಿಕ್ಕರ್ 
ದೇಶ

ಲಂಚದ ಕುರಿತು ಹೇಳಿಕೆ: ಮನೋಹರ್ ಪರಿಕ್ಕರ್ ಗೆ ಚುನಾವಣಾ ಆಯೋಗದ ಎಚ್ಚರಿಕೆ

ಗೋವಾದಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಲಂಚದ ಕುರಿತು ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಗೆ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.

ನವದೆಹಲಿ: ಗೋವಾದಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಲಂಚದ ಕುರಿತು ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಗೆ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ. 
ನಿಮ್ಮ ಹೇಳಿಕೆ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸುವಂತಿವೆ ಎಂದಿರುವ ಚುನಾವಣಾ ಆಯೋಗ, ಮುಂದಿನ ದಿನಗಳಲ್ಲಿ ಎಚ್ಚರಿಕೆಯಿಂದ ಹೇಳಿಕೆ ನೀಡುವಂತೆ ಸೂಚಿಸಿದೆ. ಜನವರಿ 29ರಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಪ್ರಚಾರ ಭಾಷಣದಲ್ಲಿ, ಜನರು ಬೇರೆ ಪಕ್ಷಗಳಿಂದ ಲಂಚ ಸ್ವೀಕರಿಸಿದರೂ ಪರವಾಗಿಲ್ಲ, ಆದರೆ ಕಮಲದ ಚಿಹ್ನೆಗೆ ಮತ ಹಾಕಿ ಎಂದು ಹೇಳಿದ್ದರು. 
ಗೋವಾ ಫಾರ್ವರ್ಡ್ ಪಕ್ಷ ಮತ್ತು ಆಮ್ ಆದ್ಮಿ ಪಕ್ಷಗಳ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ ದೂರಿನ ಅನ್ವಯ ಚುನಾವಣಾ ಅಧಿಕಾರಿಗಳ ತಂಡ ಫೆಬ್ರವರಿ 2ರಂದು ಪರಿಕ್ಕರ್ ಗೆ ನೊಟೀಸ್ ಜಾರಿ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಧರ್ಮಸ್ಥಳ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ..!

TMC ಹೆಸರು-ಚಿಹ್ನೆ ಫ್ರೀಜ್; ಚುನಾವಣಾ ಆಯೋಗದ ನಿರ್ಧಾರಕ್ಕೆ ಮಮತಾ ಬ್ಯಾನರ್ಜಿ ಆಕ್ಷೇಪ, ತುರ್ತು ವಿಚಾರಣೆಗೆ ಸುಪ್ರೀಂ ಒಪ್ಪಿಗೆ..!

ಕೊನೆಗೂ ಸುರಿದ ಮಳೆರಾಯ, ನಿಟ್ಟಿಸಿರುವ ಬಿಟ್ಟ ರಾಯಲಸೀಮೆ; 43.5 ಮಿ.ಮೀ ಮಳೆ! ಹವಾಮಾನ ಇಲಾಖೆ ಹೇಳಿದ್ದೇನು?

ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ: ಷರತ್ತು ಒಪ್ಪದ ಹೊರತು ಹಾರ್ಮುಜ್ ಜಲಸಂಧಿ ತರೆಯಲ್ಲ ಎಂದ ಇರಾನ್; ದಿಗ್ಬಂಧನ ಮತ್ತಷ್ಟು ಬಿಗಿಗೊಳಿಸಿದ ಅಮೆರಿಕ..!

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ‘ದೊಡ್ಡ ಘಟನೆ ನಡೆಯಲಿದೆ’ ಎಂದ ಟ್ರಂಪ್; ಇರಾನ್ ವಿರುದ್ಧ ಅಮೆರಿಕಾ ನಡೆಸಿರುವ ಗೇಮ್‌ಪ್ಲ್ಯಾನ್ ಏನು..?