ತಮಿಳುನಾಡು ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ 
ದೇಶ

ಶಶಿಕಲಾ ಅವರನ್ನು ಇಂದು ಭೇಟಿ ಮಾಡುವುದಿಲ್ಲ: ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ

ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರನ್ನು ಬೆಂಗಳೂರಿನ ಜೈಲಿನಲ್ಲಿ ಭೇಟಿ ಮಾಡುವ ಯಾವುದೇ...

ಚೆನ್ನೈ: ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರನ್ನು ಬೆಂಗಳೂರಿನ ಜೈಲಿನಲ್ಲಿ ಇಂದು ಭೇಟಿ ಮಾಡುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಅವರು ಇಂದು ಕುವತ್ತೂರು ರೆಸಾರ್ಟ್ ನಲ್ಲಿರುವ ಪಕ್ಷದ ಶಾಸಕರನ್ನು ಭೇಟಿ ಮಾಡುವ ಯೋಜನೆಯಲ್ಲಿದ್ದಾರೆ.
ಇಂದು ಬೆಂಗಳೂರಿಗೆ ಹೋಗಿ ಶಶಿಕಲಾ ಅವರನ್ನು ಭೇಟಿ ಮಾಡುವುದಿಲ್ಲ. ಕುವತ್ತೂರಿಗೆ ಹೋಗಿ ಶಾಸಕರನ್ನು ಭೇಟಿ ಮಾಡುವುದಾಗಿ ಪಳನಿಸ್ವಾಮಿ ಎಎನ್ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಇಂದು ನಡೆದ ರಾಜಕೀಯ ಬೆಳವಣಿಗೆಯಲ್ಲಿ ಒ.ಪನ್ನೀರ್ ಸೆಲ್ವಂ ಮತ್ತು ಅವರ ಬಣ ವಿ.ಕೆ.ಶಶಿಕಲಾ ಅವರನ್ನು ಎಐಎಡಿಎಂಕೆಯ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಿದ್ದರು.
ಪಕ್ಷದ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಇ. ಮಧುಸೂದನನ್ ಅವರು ಪನ್ನೀರ್ ಸೆಲ್ವಂ ಆದೇಶವನ್ನು ಅಂಗೀಕರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್