ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕಾಶ್ಮೀರದಲ್ಲಿ ಭುಗಿಲೆದ್ದ ಹಿಂಸಾಚಾರ: ಭದ್ರತಾ ಸಿಬ್ಬಂದಿ ಮೇಲೆ ಕಲ್ಲು ತೂರಿದ ಯುವಕರು

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಶುಕ್ರವಾರದ ಪ್ರಾರ್ಥನೆಯ ನಂತರ ಹಿಂಸಾಚಾರ ಭುಗಿಲೆದ್ದಿದ್ದು, ಪಾಕಿಸ್ತಾನ ಧ್ವಜಗಳನ್ನು ಹಿಡಿದು ಪ್ರತಿಭಟಿಸುತ್ತಿದ್ದ...

ಸಂಗ್ರಹ ಚಿತ್ರ
Lingaraj Badiger
Updated On : 17 Feb 2017, 4:36 am
ಶ್ರೀನಗರ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಶುಕ್ರವಾರದ ಪ್ರಾರ್ಥನೆಯ ನಂತರ ಹಿಂಸಾಚಾರ ಭುಗಿಲೆದ್ದಿದ್ದು, ಪಾಕಿಸ್ತಾನ ಧ್ವಜಗಳನ್ನು ಹಿಡಿದು ಪ್ರತಿಭಟಿಸುತ್ತಿದ್ದ ಯುವಕರು ಭದ್ರತಾ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಹಳೆ ಶ್ರೀನಗರದಲ್ಲಿ ನಡೆದಿದೆ.
ಇಂದು ಜಮಿಯಾ ಮಸೀದಿ ಪ್ರದೇಶದಲ್ಲಿ ತಮ್ಮ ಮುಖ ಮುಚ್ಚಿಕೊಂಡಿದ್ದ ಸುಮಾರು 25ಕ್ಕೂ ಹೆಚ್ಚು ಯುವಕರು ಪಾಕಿಸ್ತಾನದ ಬಾವುಟಗಳನ್ನು ಹಿಡಿದು ಸೇನೆ ವಿರುದ್ಧ ಘೋಷಣೆ ಕೂಗುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಉದ್ರಿಕ್ತರನ್ನು ಚದುರಿಸಲು ಯತ್ನಿಸಿದ ಪೊಲೀಸರ ಮೇಲೆ ಯುವಕರ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ. ಆದರೆ ಭದ್ರತಾ ಸಿಬ್ಬಂದಿ ಗಾಯಗೊಂಡ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ.

Advertisement

Advertisement

ಇತ್ತೀಚಿಗಷ್ಟೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಪ್ರತ್ಯೇಕವಾದಿಗಳಿಗೆ ಬೆಂಬಲ ನೀಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗವುದು ಎಂದು ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments