ಕೋಲ್ಕತಾ: ಸುಪ್ರೀಂಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಅಲ್ತಮಸ್ ಕಬೀರ್ ಅವರು ನಿಧನ ಹೊಂದಿರುವುದಾಗಿ ಭಾನುವಾರ ತಿಳಿದುಬಂದಿದೆ.
ಅಲ್ತಮಸ್ ಕಬೀರ್ ಅವರಿಗೆ 68 ವರ್ಷ ವಯಸ್ಸಾಗಿತ್ತು. ಧೀರ್ಘಕಾಲಿಕೆ ಅನಾರೋಗ್ಯದಿಂದ ಬಳಲುತ್ತಿದ್ದ ಅಲ್ತಮಸ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ.
1973ರಲ್ಲಿ ವಕೀಲಿ ವೃತ್ತಿ ಆರಂಭಿಸಿದ್ದ ಕಬೀರ್ ಅವರು 2005ರಿಂದ ಸುಪ್ರೀಂಕೋರ್ಟ್ ನಲ್ಲಿ ವಕಾಲತ್ತು ನಡೆಸುತ್ತಿದ್ದರು. ಸೆ.29 2012ರಿಂದ ಜು.18 2013ರ ವರೆಗೆ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು.