ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ 
ದೇಶ

ಸ್ಪಷ್ಪ ಅಲ್ಲ, ಸಂಪೂರ್ಣ ಬಹುಮತದ ಮೂಲಕ ಉ.ಪ್ರದೇಶದಲ್ಲಿ ಸರ್ಕಾರ ರಚಿಸುತ್ತೇವೆ: ರಾಜನಾಥ ಸಿಂಗ್

ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸಲಿದ್ದು, ಸರ್ಕಾರ ರಚನೆ ಮಾಡಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಭಾನುವಾರ ಹೇಳಿದ್ದಾರೆ...

ಲಖನೌ: ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸಲಿದ್ದು, ಸರ್ಕಾರ ರಚನೆ ಮಾಡಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.

ಉತ್ತರಪ್ರದೇಶ ವಿಧಾನಸಭಾ ಚುನಾವಣೆ 7 ಹಂತದ ಪೈಕಿ 3ನೇ ಹಂತದ ಮತದಾನ ಆರಂಭಗೊಂಡಿದ್ದು, ಲಖನೌನಲ್ಲಿ ತಮ್ಮ ಮತ ಹಕ್ಕು ಚಲಾಯಿಸಿದ ಬಳಿಕ ಮಾತನಾಡಿರುವ ಅವರು, ಸ್ಪಷ್ಟ ಬಹುಮತ ಅಲ್ಲ ಸಂಪೂರ್ಣ ಬಹುಮತದ ಮೂಲಕ ಬಿಜೆಪಿ ಉತ್ತರಪ್ರದೇಶದಲ್ಲಿ ಅಧಿಕಾರಕ್ಕೆ ಬರಲಿದೆ. ಈಗಾಗಲೇ ಉತ್ತರಪ್ರದೇಶದಲ್ಲಿ 2 ಹಂತದಲ್ಲಿ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪ್ರಸ್ತುತ ಇರುವ ಸನ್ನಿವೇಶಗಳನ್ನು ಗಮನಿಸಿದರೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಹೇಳಿದ್ದಾರೆ.

ರಾಜ್ಯದಲ್ಲಿರುವ ಪ್ರತೀಯೊಬ್ಬ ಮತದಾರರು ಮತದಾನ ಮಾಡುವಂತೆ ಈ ಮೂಲಕ ಮನವಿ ಮಾಡಿಕೊಳ್ಳುದ್ದಿದ್ದೇನೆ. ಚುನಾವಣೆ ಪ್ರಜಾಪ್ರಭುತ್ವದ ಹಬ್ಬವಾಗಿದ್ದು, ಪ್ರತೀಯೊಬ್ಬ ಮತದಾರರು ಈ ಹಬ್ಬದಲ್ಲಿ ಭಾಗಿಯಾಗಬೇಕಿದೆ. ಮಾರ್ಚ್ 11ಕ್ಕೆ ಎಲ್ಲವೂ ಸ್ಪಷ್ಟವಾಗಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಲೋಕಭವನಕ್ಕೆ ಆಗಮಿಸಿದ ಸಿದ್ದರಾಮಯ್ಯ, ಶೀಘ್ರದಲ್ಲೇ ರಾಜೀನಾಮೆ

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ನಿರ್ಗಮನ: ಕರ್ನಾಟಕದಲ್ಲಿ ಕಾಂಗ್ರೆಸ್‌ನ 'ಅಹಿಂದ ಮತಬ್ಯಾಂಕ್' ಮೇಲೆ ಪರಿಣಾಮ?

SCROLL FOR NEXT