ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ಪ್ರಜಾಪ್ರಭುತ್ವ ಹಬ್ಬದಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ: ಪ್ರಧಾನಿ ಮೋದಿ

ಚುನಾವಣೆ ಪ್ರಜಾಪ್ರಭುತ್ವದ ಹಬ್ಬವಾಗಿದ್ದು, ಉತ್ತರಪ್ರದೇಶದಲ್ಲಿ ನಡೆಯುತ್ತಿರುವ 3ನೇ ಹಂತದ ಮತದಾನ ಪ್ರಕ್ರಿಯೆಯಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ...

ನವದೆಹಲಿ: ಚುನಾವಣೆ ಪ್ರಜಾಪ್ರಭುತ್ವದ ಹಬ್ಬವಾಗಿದ್ದು, ಉತ್ತರಪ್ರದೇಶದಲ್ಲಿ ನಡೆಯುತ್ತಿರುವ 3ನೇ ಹಂತದ ಮತದಾನ ಪ್ರಕ್ರಿಯೆಯಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಕರೆ ನೀಡಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಉತ್ತರಪ್ರದೇಶದಲ್ಲಿ ಇಂದು ಮೂರನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಚುನಾವಣೆ ಪ್ರಜಾಪ್ರಭುತ್ವದ ಹಬ್ಬವಾಗಿದ್ದು, ಪ್ರತೀಯೊಬ್ಬ ಮತದಾರರು ಹಬ್ಬದಲ್ಲಿ ಪಾಲ್ಗೊಂಡು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕೆಂದು ಮನವಿ ಮಾಡಿಕೊಳ್ಳುತ್ತೇನೆಂದು ಹೇಳಿದ್ದಾರೆ.

ಉತ್ತರಪ್ರದೇಶ ವಿಧಾನಸಭಾ ಚುನಾವಣೆ 7 ಹಂತದ ಪೈಕಿ 3ನೇ ಹಂತದ ಮತದಾನ ಆರಂಭಗೊಂಡಿದ್ದು, ಲಖನೌ, ಕನೌಜ್, ಮೈನ್ ಪುರಿ ಮತ್ತು ಇಟಾವಾ ಜಿಲ್ಲಾ ಕ್ಷೇತ್ರಗಳು ಸೇರಿದಂತೆ ಒಟ್ಟು 69 ಸ್ಥಾನಗಳಿಗೆ ಮತದಾನ ನಡೆಯಲಿದೆ. ಸುಮಾರು 2.4 ಕೋಟಿ ಮತದಾರರು ಮತದಾನಕ್ಕೆ ಅರ್ಹರಾಗಿದ್ದು, 826 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; ಎರಡು ದಿನಗಳ ಡೆಡ್‌ಲೈನ್‌!

ಆಯ್ಕೆ ಸಮಿತಿ ಅಧ್ಯಕ್ಷರ ಆಯ್ಕೆ ಕಸರತ್ತು; BCCI ಆಫರ್ ತಿರಸ್ಕರಿಸಿದ ಸ್ಟಾರ್‌ ಗಳು, 100 ಟೆಸ್ಟ್‌ ಅನುಭವಿ ಆಟಗಾರರಿಂದಲೇ ನಕಾರ?

ಭಾವಿ ಪತಿಯನ್ನೇ ಹತ್ಯೆಗೈದ ರಿಂಗ್ ರೋಡ್ ಶುಭಾಗೆ ಬಿಗ್ ಶಾಕ್: ಕ್ಷಮಾದಾನ ಅರ್ಜಿ ತಿರಸ್ಕರಿಸಿದ ಸಚಿವ ಸಂಪುಟ!

ಸಂಶಯ ಬಂದ್ರೆ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ