ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್
ಲಕ್ನೋ: ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸರ್ಕಾರ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಜನರು ಅವರನ್ನು ಮತ್ತೆ ಆಯ್ಕೆ ಮಾಡದಿರಲು ಯಾವುದೇ ಕಾರಣಗಳಿಲ್ಲ ಎಂದು ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ.
ಸಮಾಜವಾದಿ ಪಕ್ಷ ಬಡ ಮತ್ತು ಮಧ್ಯಮ ವರ್ಗದ, ರೈತರು ಹಾಗೂ ಸಮಾಜದ ಇತರ ವರ್ಗದ ಜನರ ಏಳಿಗೆಗಾಗಿ ಅನೇಕ ಕೆಲಸಗಳನ್ನು ಮಾಡಿದೆ. ಅಖಿಲೇಶ್ ಮತ್ತೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗುತ್ತಾರೆ ಎಂದು ಹೇಳಿದರು.
ಉತ್ತರ ಪ್ರದೇಶದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳಾಗಿವೆ. ಅಖಿಲೇಶ್ ಮತ್ತೆ ಮುಖ್ಯಮಂತ್ರಿಯಾಗುತ್ತಾರೆ. ಇಲ್ಲಿನ ಜನರು ಎಂದೆಂದಿಗೂ ನಮ್ಮ ಕುಟುಂಬಕ್ಕೆ ಬೆಂಬಲ ನೀಡಿದ್ದಾರೆ. ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದಾರೆ. ಅಖಿಲೇಶ್ ಅವರನ್ನು ಕೂಡ ಮುಖ್ಯಮಂತ್ರಿಯನ್ನಾಗಿ ಆರಿಸಿದ್ದಾರೆ. ನಮ್ಮ ಪಕ್ಷ ಬಡವರು, ರೈತರ ಪರ ಕೆಲಸ ಮಾಡಿದ್ದು ನಮ್ಮನ್ನು ಆರಿಸದೆ ಇರಲು ಯಾವುದೇ ಕಾರಣಗಳಿಲ್ಲ ಎಂದರು.
ಶಿವಪಾಲ್ ಅವರ ಅದೃಷ್ಟದ ಬಗ್ಗೆ ಪತ್ರಕರ್ತರು ಪ್ರಶ್ನೆ ಕೇಳಿದಾಗ, ಅವರು ಭಾರೀ ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸುತ್ತಾರೆ ಎಂದರು.