ನವದೆಹಲಿ: ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆಯನ್ನು ಖಾಸಗೀಕರಣಗೊಳಿಸಲು 5 ವರ್ಷಗಳ ಹಿಂದೆ ಯುಪಿಎ ಸರ್ಕಾರ ರೂಪಿಸಿದ್ದ ಯೋಜನೆಗೆ ಅಂದಿನ ವಿತ್ತ ಸಚಿವರಾಗಿದ್ದ ಪ್ರಣಬ್ ಮುಖರ್ಜಿ ಬ್ರೇಕ್ ಹಾಕಿದ್ದರಂತೆ. ಈ ವಿಷಯ ಈಗ ಬಹಿರಂಗವಾಗಿದೆ.
2011 ರ ಅಕ್ಟೋಬರ್ 28 ರಂದು ಯುಪಿಎ ಸರ್ಕಾರ ಏರ್ ಇಂಡಿಯಾ ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ಪ್ರಸ್ತಾವನೆ ಮುಂದಿಟ್ಟಿದ್ದ, ಈ ಬಗ್ಗೆ ಅಭಿಪ್ರಾಯ ಕೇಳಲು ಗ್ರೂಪ್ ಆಫ್ ಮಿನಿಸ್ಟರ್ಸ್ (ಜಿಒಎಂ) ಸಭೆ ಕರೆದಿತ್ತು. ಆದರೆ ಸಭೆಯಲ್ಲಿ ಭಾಗವಹಿಸಿದ್ದ ಪ್ರಣಬ್ ಮುಖರ್ಜಿ ಮಾತ್ರ ಈ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದರಂತೆ. ಪ್ರಣಬ್ ಮುಖರ್ಜಿ ಅವರ ವಿರೋಧದಿಂದಾಗಿ ಯುಪಿಎ ಸರ್ಕಾರ ಈ ಯೋಜನೆಯನ್ನು ಕೈಬಿಟ್ಟಿತ್ತೆಂದು ತಿಳಿದುಬಂದಿದೆ.
ತೀವ್ರ ನಷ್ಟದಲ್ಲಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಯುಪಿಎ ಸರ್ಕಾರ ಏರ್ ಇಂಡಿಯಾ ಸಂಸ್ಥೆಯನ್ನು ಖಾಸಗೀಕರಣಗೊಳಿಸಲು ಮುಂದಾಗಿತ್ತು. ಆದರೆ ಸಚಿವರ ಸಮೂಹದ ವಿರುದ್ಧದ ನಿಲುವಾಗಿದೆ ಎಂಬ ಹಿನ್ನೆಲೆಯಲ್ಲಿ ಈ ಯತ್ನವನ್ನು ಕೈಬಿಡಲಾಗತ್ತು.