ದೇಶ

ಉತ್ತರ ಪ್ರದೇಶ ಚುನಾವಣೆ: ರಾಯ್ ಬರೇಲಿ ಕ್ಷೇತ್ರದಲ್ಲೂ ಪ್ರಚಾರ ನಡೆಸದ ಸೋನಿಯಾ ಗಾಂಧಿ

Srinivas Rao BV
ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ನಡೆಯಲಿರುವ ಕೊನೆಯ ಹಂತದ ಚುನಾವಣೆಗೆ ಸಿದ್ಧತೆ ನಡೆದಿದ್ದು, ಫೆ.21 ಚುನಾವಣೆ ಪ್ರಚಾರಕ್ಕೆ ತೆರೆ ಬೀಳಲಿದೆ. 
ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಚುನಾವಣೆಗೆ ಬಿರುಸಿನ ಪ್ರಚಾರ ಕೈಗೊಂಡಿದ್ದರೂ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಾತ್ರ ಈ ವರೆಗೂ ಪ್ರಚಾರ ನಡೆಸಿಲ್ಲ. ಕೊನೆಯ ದಿನದ ಚುನಾವಣಾ ಪ್ರಚಾರದಲ್ಲೂ ಸಹ ಸೋನಿಯಾ ಗಾಂಧಿಯ ಹೆಸರು ಕಂಡುಬಂಡಿಲ್ಲ. ರಯ್ ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಚುನಾವಣಾ ಪ್ರಚಾರದ ವೇಳಾಪಟ್ಟಿಯಲ್ಲಿ ಸೋನಿಯಾ ಗಾಂಧಿ ಅವರ ಹೆಸರು ಪ್ರಕಟಿಸಲಾಗಿದೆಯಾದರೂ ಸೋನಿಯಾ ಗಾಂಧಿ ಬರುವುದು ಅನುಮಾನ ಎಂದು ಹೇಳಲಾಗುತ್ತಿದೆ. 
ಫೆ.21 ರಂದು ರಾಯ್ ಬರೇಲಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಹಾಗೂ ಸಮಾಜವಾದಿ ಪಕ್ಷದ ಮುಖಂಡ ಸಿಎಂ ಅಖಿಲೇಶ್ ಯಾದವ್ ಅವರ ಚುನಾವಣಾ ಪ್ರಚಾರ ಕಾರ್ಯಕ್ರಮ ನಿಗದಿಯಾಗಿದೆ. ಅಚ್ಚರಿ ಎಂದರೆ ಕೇವಲ ಉತ್ತರ ಪ್ರದೇಶ ಮಾತ್ರವಲ್ಲದೇ, ಪಂಜಾಬ್, ಗೋವಾ, ಉತ್ತರಾಖಂಡ್, ಮಣಿಪುರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲೂ ಸಹ ಸೋನಿಯಾ ಗಾಂಧಿ ಭಾಗವಹಿಸದೇ ಇದೇ ಮೊದಲ ಬಾರಿಗೆ ಸೋನಿಯಾ ಗಾಂಧಿ ಚುನಾವಣಾ ಪ್ರಚಾರಗಳಿಂದ ದೂರ ಉಳಿದಿದ್ದಾರೆ. 
SCROLL FOR NEXT