ದೇಶ

ಐಎನ್‌ಎಸ್ ವಿರಾಟ್ ಯುದ್ಧ ನೌಕೆ ಮಾ.6 ಕ್ಕೆ ನಿವೃತ್ತಿ!

Srinivas Rao BV
ಮುಂಬೈ: ಸೇವೆಯಲ್ಲಿರುವ ವಿಶ್ವದ, ಭಾರತದ ಅತ್ಯಂತ ಹಳೆಯ ಯುದ್ಧ ನೌಕೆ ಎಂಬ ಹೆಗ್ಗಳಿಕೆ ಪಡೆದಿರುವ ಐಎನ್ಎಸ್ ವಿರಾಟ್ ಮಾ.6 ಕ್ಕೆ ನಿವೃತ್ತಿಯಾಗಲಿದೆ. 
ಕಾರ್ಯಾಚರಣೆಯಿಂದ ತೆಗೆದು ಹಾಕುವ ಕಾರ್ಯಕ್ರಮ ಮುಂಬೈ ನಲ್ಲಿ ನಡೆಯಲಿದ್ದು, ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ನೌಕಾ ಪಡೆಯ ಧ್ವಜವನ್ನು ಹಾರಿಸುವ ಮೂಲಕ 55 ವರ್ಷಗಳ ಕಾಲ ಸಕ್ರಿಯವಾಗಿದ್ದ ಐಎನ್ಎಸ್ ವಿರಾಟ್ ಯುದ್ಧ ನೌಕೆಗೆ ಬೀಳ್ಕೊಡುಗೆ ನೀಡಲಾಗುತ್ತದೆ. ನಿವೃತ್ತಿಯ ನಂತರ ಯುದ್ಧ ನೌಕೆಯ ಭವಿಷ್ಯವನ್ನು ಇನ್ನೂ ನಿರ್ಧರಿಸಲಾಗಿಲ್ಲ. ಆದರೆ ಕೆಲವೊಂದು ಮೂಲಗಳ ಮಾಹಿತಿ ಪ್ರಕಾರ ಆಂಧ್ರ ಪ್ರದೇಶ ಸರ್ಕಾರ ಈ ನೌಕೆಯನ್ನು ಪಡೆಯಲು ಉತ್ಸಾಹ ತೋರಿದೆ ಎಂದು ಹೇಳಲಾಗುತ್ತಿದೆ. 
1959 ರಲ್ಲಿ ಪೂರ್ಣಗೊಂಡು ಬ್ರಿಟನ್ ನ ರಾಯಲ್ ನೇವಿಯಲ್ಲಿ ಸೇವೆಗೆ ಸೇರ್ಪಡೆಯಾಗಿದ್ದ ಹೆಚ್ಎಂಎಸ್ ಹರ್ಮಿಸ್ ನ್ನು ಅಲ್ಲಿನ ನೌಕಾಪಡೆ 1984 ರಲ್ಲಿ ಹೆಚ್ಎಂಎಸ್ ಹರ್ಮಿಸ್ ನ್ನು ಸೇವೆಯಿಂದ ನಿವೃತ್ತಿಗೊಳಿಸಿತ್ತು. ನಂತರ 1987 ಮೇ. 12 ರಂದು ಭಾರತೀಯ ನೌಕಾ ಪಡೆ ಅದನ್ನು ಸೇವೆಗೆ ನಿಯುಕ್ತಿಗೊಳಿಸಿತ್ತು. 

ಶ್ರೀಲಂಕಾದಲ್ಲಿ ಶಾಂತಿ ಸ್ಥಾಪನೆಗಾಗಿ 1989 ರಲ್ಲಿ ನಡೆದ ಆಪರೇಷನ್ ಜುಪಿಟರ್, 1999 ರ ಕಾರ್ಗಿಲ್ ಯುದ್ಧದ ವೇಳೆ ನಡೆದ ಆಪರೇಷನ್ ವಿಜಯ್ ಕಾರ್ಯಾಚರಣೆಗಳಲ್ಲಿ  ಪ್ರಮುಖ ಪಾತ್ರ ವಹಿಸಿದ್ದ ಐಎನ್ಎಸ್ ವಿರಾಟ್ ಯುದ್ಧ ನೌಕೆ ಸೇವೆಯಲ್ಲಿರುವ ವಿಶ್ವದ ಅತ್ಯಂತ ಹಳೆಯ ಯುದ್ಧ ನೌಕೆ ಎಂಬ ಹೆಗ್ಗಳಿಕೆ ಹೊಂದಿದ್ದು, ಗಿನ್ನೀಸ್ ವಿಶ್ವದಾಖಲೆಯ ಪುಟ ಸೇರಿದೆ
SCROLL FOR NEXT