ಸಂಗ್ರಹ ಚಿತ್ರ 
ದೇಶ

ಹೈದರಾಬಾದ್ ನಲ್ಲಿ ಭೀಕರ ಅಗ್ನಿ ಅವಘಡ; ಆರು ಮಂದಿ ಸಜೀವ ದಹನ!

ಹೈದರಾಬಾದ್ ನಲ್ಲಿರುವ ಎಸಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಿಂದಾಗಿ ಆರು ಮಂದಿ ಸಜೀವ ದಹನವಾಗಿರುವ ಘಟನೆ ಬುಧವಾರ ನಡೆದಿದೆ.

ಹೈದರಾಬಾದ್: ಹೈದರಾಬಾದ್ ನಲ್ಲಿರುವ ಎಸಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಿಂದಾಗಿ ಆರು ಮಂದಿ ಸಜೀವ ದಹನವಾಗಿರುವ ಘಟನೆ ಬುಧವಾರ ನಡೆದಿದೆ.

ಹೈದರಾಬಾದ್ ನ ಅತ್ತಾಪುರ ರಾಜೇಂದ್ರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದ್ದು, ಮೃತರೆಲ್ಲರೂ ಒಡಿಶಾ ಮೂಲದ ಕಾರ್ಮಿಕರು ಎಂದು ತಿಳಿದುಬಂದಿದೆ. "ಎ1 ಏರ್ ಕೂಲರ್ಸ್" ತಂಡದ ಶೆಡ್ ಗೆ ಬೆಂಕಿ  ಬಿದ್ದಿದ್ದು, ಅಗ್ನಿ ಅವಘಡಕ್ಕೆ ಏರ್ ಕೂಲರ್ ಒಂದರಲ್ಲಿನ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗುತ್ತಿದ್ದರೂ, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಇನ್ನು ಘಟನೆಯಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸುಮಾರು 4ಕ್ಕೂ ಹೆಚ್ಚು ಅಗ್ನಿ ಶಾಮಕ ವಾಹನಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಸತತ ಬೆಂಕಿ ನಂದಿಸುವ  ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಅಗ್ನಿ ಅವಘಡ ಸಂದರ್ಭದಲ್ಲಿ ಘಟಕದಲ್ಲಿ ಎಷ್ಟು ಮಂದಿ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿಲ್ಲ. ಕಾರ್ಯಾಚರಣೆ ಮುಕ್ತಾಯದ ಬಳಿಕವಷ್ಟೇ ಎಲ್ಲ ಮಾಹಿತಿ ತಿಳಿಯಲಿದೆ ಎಂದು ಅಧಿಕಾರಿಯೊಬ್ಬರು  ತಿಳಿಸಿದ್ದಾರೆ. ಆರು ಮಂದಿ ಮೃತರ ಪೈಕಿ ನಾಲ್ಕು ಮಂದಿಯ ಮೃತ ದೇಹಗಳನ್ನು ಗುರುತಿಸಲಾಗಿದ್ದು, ಮೃತರನ್ನು ಇರ್ಫಾನ್, ಸದ್ದಾಂ, ಶಾರುಖ್ ಮತ್ತು ಅಯೂಬ್ ಖಾನ್ ಎಂದು ಹೇಳಲಾಗುತ್ತಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಶಂಕೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT