ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಉತ್ತರಪ್ರದೇಶದಲ್ಲಿ ಭೀಕರ ಅಪಘಾತ: ಬಸ್-ಟ್ರಕ್ ಮುಖಾಮುಖಿ ಡಿಕ್ಕಿ- 6 ಸಾವು

ಉತ್ತರಪ್ರದೇಶದ ಹರ್ದೋಯ್ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬಸ್ ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಗುರುವಾರ...

ಉತ್ತರಪ್ರದೇಶದಲ್ಲಿ ಭೀಕರ ಅಪಘಾತ: ಬಸ್-ಟ್ರಕ್ ಮುಖಾಮುಖಿ ಡಿಕ್ಕಿ- 6 ಸಾವು
Manjula VN
Updated On : 23 Feb 2017, 2:58 am

ಹರ್ದೊಯ್: ಉತ್ತರಪ್ರದೇಶದ ಹರ್ದೋಯ್ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬಸ್ ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.

ಹರ್ದೋಯ್ ನ ರಸ್ತೆಯೊಂದರಲ್ಲಿ ಬಸ್ ತೆರಳುತ್ತಿದ್ದ ವೇಳೆ ಎದುರಿಗೆ ವೇಗ ಚಲಿಸುತ್ತಿದ್ದ ಟ್ರಕ್ ಬಂದಿದೆ. ಈ ವೇಳೆ ಎರಡೂ ವಾಹನಗಳ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಟ್ರಕ್ ನಲ್ಲಿ ಒಟ್ಟು 10 ಮಂದಿ ಚಲಿಸುತ್ತಿದ್ದರು. ಡಿಕ್ಕಿ ಹೊಡೆದ ಪರಿಣಾಮ ಟ್ರಂಕ್ ನಲ್ಲಿದ್ದ 10 ಮಂದಿಯ ಪೈಕಿ 6 ಮಂದಿ ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿದ್ದಾರೆ. ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಪ್ರಸ್ತುತ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕಾಗಮಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement