ಬಿಎಸ್ಎಸ್ ಸಿ ಪೇಪರ್ ಲೀಕ್: ಹಿರಿಯ ಐಎಎಸ್ ಅಧಿಕಾರಿ ಸುಧೀರ್ ಕುಮಾರ್ ಬಂಧನ
ಬಿಎಸ್ಎಸ್ ಸಿ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಸ್ಟಾಫ್ ಸೆಲೆಕ್ಷನ್ ಕಮಿಷನ್(ಬಿಎಸ್ಎಸ್ ಸಿ) ಅಧ್ಯಕ್ಷ ಹಾಗೂ...
ಪಾಟ್ನಾ: ಬಿಎಸ್ಎಸ್ ಸಿ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಸ್ಟಾಫ್ ಸೆಲೆಕ್ಷನ್ ಕಮಿಷನ್(ಬಿಎಸ್ಎಸ್ ಸಿ) ಅಧ್ಯಕ್ಷ ಹಾಗೂ ಹಿರಿಯ ಐಎಎಸ್ ಅಧಿಕಾರಿ ಸುಧೀರ್ ಕುಮಾರ್ ಅವರನ್ನು ಶುಕ್ರವಾರ ಬಂಧಿಸಲಾಗಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಜಾಲವನ್ನು ಬೇಧಿಸಿದ ವಿಶೇಷ ತನಿಖಾ ತಂಡ ಐಎಎಸ್ ಅಧಿಕಾರಿ ಸೇರಿದಂತೆ ಇದುವರೆಗೆ 6 ಮಂದಿಯನ್ನು ಬಂಧಿಸಿದ್ದಾರೆ. ಇತ್ತೀಚಿಗಷ್ಟೇ ಖಾಸಗಿ ಶಾಲೆ ಹಾಗೂ ಕೋಚಿಂಗ್ ಸೆಂಟರ್ ಗಳ ಮುಖ್ಯಸ್ಥರನ್ನು, ಬಿಎಸ್ಎಸ್ ಸಿಯ ಕಾರ್ಯದರ್ಶಿ ಪರಮೇಶ್ವರ್ ರಾಮ್, ಹಾಗೂ ಡೇಟಾ ಆಪರೇಟರ್ ಅವಿನಾಶ್ ಕುಮಾರ್ ಅವರನ್ನು ಎಸ್ಐಟಿ ಬಂಧಿಸಿತ್ತು.
ಫೆ,8ರಂದು ನಡೆಯಬೇಕಿದ್ದ ಎರಡನೇ ಹಂತದ ಪರೀಕ್ಷೆಯ ಪ್ರಶ್ನೆಪತ್ರಿಕೆ ಆನ್ ಲೈನ್ ನಲ್ಲಿ ಸೋರಿಕೆಯಾದ ನಂತರ ಜನವರಿ 29, ಫೆಬ್ರವರಿ 5, ಫೆ.19 ಮತ್ತು ಫೆ.26ಕ್ಕೆ ನಿಗದಿಯಾಗಿದ್ದ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ.
ಆರಂಭದಲ್ಲಿ ಅಭ್ಯರ್ಥಿಗಳಿಂದ ತಲಾ 20,000 ರುಪಾಯಿ ಪಡೆದು ಉತ್ತರಗಳನ್ನು ಖದೀಮರು ವಾಟ್ಸಾಪ್ ಮೂಲಕ ಕಳುಹಿಸಿದ್ರು. ಪ್ರತಿ ಅಭ್ಯರ್ಥಿಯಿಂದ್ಲೂ ಕಂತಿನಲ್ಲಿ ಒಟ್ಟು 5-6 ಲಕ್ಷ ರೂಪಾಯಿ ಪಡೆದುಕೊಳ್ಳಲು ಸ್ಕೆಚ್ ಹಾಕಿದ್ದರು ಎನ್ನಲಾಗಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.