ಭಾರತೀಯ ಮೇಲೆ ದಾಳಿ ನಡೆದ ಸ್ಥಳದಲ್ಲಿ ಭದ್ರತಾಧಿಕಾರಿಗಳು 
ದೇಶ

ಭಾರತೀಯನ ಹತ್ಯೆಗೆ ಖಂಡನೆ: ನ್ಯಾಯದ ಭರವಸೆ ನೀಡಿದ ಅಮೆರಿಕ

ಕನ್ಸಾಸ್ ಭಾರತೀಯ ಇಂಜಿನಿಯರ್ ಹತ್ಯೆ ಪ್ರಕರಣಕ್ಕೆ ಅಮೆರಿಕ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಪ್ರಕರಣ ಸಂಬಂಧ ನ್ಯಾಯ ದೊರಕಿಸಿಕೊಡುವುದಾಗಿ ಶುಕ್ರವಾರ ಭರವಸೆ ನೀಡಿದೆ...

ವಾಷಿಂಗ್ಟನ್; ಕನ್ಸಾಸ್ ಭಾರತೀಯ ಇಂಜಿನಿಯರ್ ಹತ್ಯೆ ಪ್ರಕರಣಕ್ಕೆ ಅಮೆರಿಕ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಪ್ರಕರಣ ಸಂಬಂಧ ನ್ಯಾಯ ದೊರಕಿಸಿಕೊಡುವುದಾಗಿ ಶುಕ್ರವಾರ ಭರವಸೆ ನೀಡಿದೆ. 
ಭಾರತೀಯನ ಹತ್ಯೆ ಪ್ರಕರಣ ಸಂಬಂಧ ಇಂದು ಅಮೆರಿಕಾ ರಾಯಭಾರಿ ಕಚೇರಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಭಾರತೀಯನ ಸಾವಿಗೆ ತೀವ್ರ ಸಂತಾಪ ಸೂಚಿಸಿದೆ. ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ಭಾರತೀಯ ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಹಾರೈಸುತ್ತೇವೆಂದು ಹೇಳಿದೆ. 
ಪ್ರಕರಣ ಸಂಬಂಧ ಈಗಾಗಲೇ ಭಾರತೀಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದ್ದು, ಸಂತ್ರಸ್ತರಿಗೆ ಸಂಪೂರ್ಣ ಸಹಾಯವನ್ನು ಮಾಡಲಾಗುತ್ತದೆ. ಪ್ರಕರಣವನ್ನು ಫೆಡರಲ್ ತನಿಖಾ ಸಂಸ್ಥೆ ತನಿಖೆ ನಡೆಸುತ್ತಿದ್ದು, ಪ್ರಕರಣ ಸಂಬಂಧ ನ್ಯಾಯ ದೊರಕಿಸಿಕೊಡಲಾಗುತ್ತದೆ ಎಂದು ಹೇಳಿದೆ. 
ಪ್ರಕರಣ ಸಂಬಂಧ ಹೇಳಿಕೆ ನೀಡಿರುವ ಅಮೆರಿಕದ ಮುಖ್ಯ ರಾಯಭಾರಿ ಮೇರಿಕೇ ಕಾರ್ಲ್ಸನ್ ಅವರು, ನಮ್ಮದು ವಲಸಿಗರ ದೇಶವಾಗಿದ್ದು, ವಿಶ್ವದ ಇತರೆ ದೇಶಗಳಿಂದ ಬರುವ ಎಲ್ಲಾ ರಾಷ್ಟ್ರದ ಜನರವನ್ನು ನಾವು ಸ್ವಾಗತಿಸುತ್ತೇವೆ. ಪ್ರಸ್ತುತ ಪ್ರಕರಣವನ್ನು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಸಂತ್ರಸ್ತ ಭಾರತೀಯ ವ್ಯಕ್ತಿಯ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿಕೊಡಲಾಗುತ್ತದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!