ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ 
ದೇಶ

ಕಾನ್ಸಾಸ್'ನಲ್ಲಿ ಭಾರತೀಯ ವ್ಯಕ್ತಿ ಹತ್ಯೆ ಪ್ರಕರಣ ಆಘಾತ ತಂದಿದೆ: ಸುಷ್ಮಾ ಸ್ವರಾಜ್

ಅಮೆರಿಕದ ಕಾನ್ಸಾಸ್ ನಲ್ಲಿ ಭಾರತೀಯ ವ್ಯಕ್ತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಸಂತಾಪ ಸೂಚಿಸಿರುವ ವಿದೇಶ ಸಚಿವೆ ಸುಷ್ಮಾ ಸ್ವರಾಜ್ ಅವರು ಪ್ರಕರಣ ಸಾಕಷ್ಟು ಆಘಾತವನ್ನು ತಂದಿದೆ...

ನವದೆಹಲಿ: ಅಮೆರಿಕದ ಕಾನ್ಸಾಸ್ ನಲ್ಲಿ ಭಾರತೀಯ ವ್ಯಕ್ತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಸಂತಾಪ ಸೂಚಿಸಿರುವ ವಿದೇಶ ಸಚಿವೆ ಸುಷ್ಮಾ ಸ್ವರಾಜ್ ಅವರು ಪ್ರಕರಣ ಸಾಕಷ್ಟು ಆಘಾತವನ್ನು ತಂದಿದೆ ಎಂದು ಶುಕ್ರವಾರ ಹೇಳಿದ್ದಾರೆ.

ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಭಾರತೀಯನ ಹತ್ಯೆ ಪ್ರಕರಣ ಆಘಾತನವನ್ನು ತಂದಿದೆ. ಪ್ರಕರಣ ಸಂಬಂಧ ಶ್ರೀನಿವಾಸ್ ಅವರ ಕುಟುಂಬಸ್ಥರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಾಯವನ್ನು ಕೇಂದ್ರ ಮಾಡಲಿದೆ ಎಂದು ಹೇಳಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಅಮೆರಿಕದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳನ್ನು ಸಂಪರ್ಕ ಮಾಡಿ ಮಾತುಕತೆ ನಡೆಸಿದ್ದೇನೆ. ಘಟನೆಯಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಭಾರತೀಯ ಅಲೋಕ್ ಮದಸಾನಿ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆಂದು ಸುಷ್ಮಾ ಸ್ವರಾಜ್ ಅವರು ತಿಳಿಸಿದ್ದಾರೆ.

ಕನ್ಸಾಸ್ ನ ಒಲಾತೆ ಎಂಬಲ್ಲಿ ಬಾರೊಂದರಲ್ಲಿ ಭಾರತೀಯ ಮೇಲೆ ದಾಳಿ ನಡೆಸಲಾಗಿತ್ತು. 'ನಮ್ಮ ದೇಶವನ್ನು ಬಿಟ್ಟು ತೊಲಗಿ' ಎಂದು ಕೂಗಿರುವ ದುಷ್ಕರ್ಮಿಯೊಬ್ಬ ಇದ್ದಕ್ಕಿದ್ದಂತೆ ಹೈದರಾಬಾದ್ ಮೂಲದ ಇಂಜಿನಿಯರ್ ಶ್ರೀನಿವಾಸ್ ಕುಂಚುಬೊಟ್ಲ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT