ಮುಂಬೈ: ಬೃಹನ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಬಿಜೆಪಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನಿವಾಸದಲ್ಲಿ ಕೋರ್ ಕಮಿಟಿ ಸಭೆ ನಡೆಸಿದ್ದು, ಮೈತ್ರಿ ವಿಷಯವಾಗಿ ಮುಂದಿನ ನಡೆ ಬಗ್ಗೆ ಚರ್ಚೆ ನಡೆಸಿದೆ.
ಮುಂಬೈ ಬಿಜೆಪಿ ಅಧ್ಯಕ್ಷ ಆಶೀಶ್ ಶೀಲರ್ ದೇವೇಂದ್ರ ಫಡ್ನವೀಸ್, ಸ್ಥಳೀಯ ನಾಯಕರನ್ನು ಭೇಟಿ ಮಾಡಿದ್ದು ಮಾತುಕತೆ ನಡೆಸಿದ್ದಾರೆ. ಬಿಎಂಸಿ ಆಡಳಿತದಲ್ಲಿ ಪಾರದರ್ಶಕತೆ ಜಾರಿಗೊಳಿಸುವುದು ಬಿಜೆಪಿಯ ಪ್ರಮುಖ ಉದ್ದೇಶವಾಗಿದೆ ಎಂದು ಬಿಜೆಪಿ ನಾಯಕರು ಸಭೆಯ ಬಳಿಕ ಹೇಳಿದ್ದು ಕಾಂಗ್ರೆಸ್ ನೊಂದಿಗಿನ ಮೈತ್ರಿಯ ಸಾಧ್ಯತೆಯನ್ನು ನಿರಾಕರಿಸಿದ್ದಾರೆ.
227 ಸದಸ್ಯ ಬಲದ ಬಿಎಂಸಿಯಲ್ಲಿ ಅಧಿಕಾರ ಹಿಡಿಯಲು 114 ಸದಸ್ಯರ ಬೆಂಬಲ ಅಗತ್ಯವಿದೆ. ಆದರೆ ಬಿಜೆಪಿ 82 ಸದಸ್ಯರನ್ನು ಮಾತ್ರ ಹೊಂದಿದ್ದು, ಶಿವಸೇನೆ 84 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಫಲಿತಾಂಶ ಅತಂತ್ರವಾಗಿ ಮೈತ್ರಿಯ ಅನಿವಾರ್ಯತೆ ಎದುರಾಗಿದ್ದು, ಬಿಎಂಸಿಯಲ್ಲಿ ಯಾವ ಪಕ್ಷಗಳ ಮೈತ್ರಿಕೂಟ ಅಧಿಕಾರ ಹಿಡಿಯಲಿದೆ ಎಂಬ ಬಗ್ಗೆ ಕುತೂಹಲ ಮುಂದುವರೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics