ನಾನು ಎಬಿವಿಪಿಗೆ ಹೆದರಲ್ಲ: ಫೇಸ್ಬುಕ್ ನಲ್ಲಿ ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ, ಪೋಸ್ಟ್ ವೈರಲ್
ಕಾಂರ್ಗಿಲ್ ಹುತಾತ್ಮ ಯೋಧನ ಪುತ್ರಿ, ಲೇಡಿ ಶ್ರೀ ರಾಮ ಕಾಲೇಜು ವಿದ್ಯಾರ್ಥಿನಿ ಗುರ್ವೆುೕಹರ್ ಕೌರ್ ದೆಹಲಿ ವಿಶ್ವವಿದ್ಯಾಲಯದ...
ನವದೆಹಲಿ: ಕಾಂರ್ಗಿಲ್ ಹುತಾತ್ಮ ಯೋಧನ ಪುತ್ರಿ, ಲೇಡಿ ಶ್ರೀ ರಾಮ ಕಾಲೇಜು ವಿದ್ಯಾರ್ಥಿನಿ ಗುರ್ವೆುೕಹರ್ ಕೌರ್ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದು, ಇದೀಗ ವೈರಲ್ ಆಗಿದೆ.
ಕೈ ಬರಹವುಳ್ಳ ಘೊಷ ಪಟ್ಟಿಯನ್ನು ಹಿಡಿದು ನಿಂತಿರುವ ಗುರ್ವೆುೕಹರ್ ಕೌರ್, ನಾನು ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ. ನಾನು ಎಬಿವಿಪಿಯಿಂದ ಭಯಗೊಂಡಿಲ್ಲ. ನಾನು ಒಂಟಿಯಲ್ಲ. ನನ ಜತೆಗೆ ಭಾರತದ ಪ್ರತಿಯೊಬ್ಬ ವಿದ್ಯಾರ್ಥಿಯೂ ಇದ್ದಾರೆ’ ಎಂದು ಬರೆದುಕೊಂಡಿದ್ದಾಳೆ.
ಭಾರತದ ಪ್ರತಿಯೊಬ್ಬ ಪ್ರಜೆಗೂ ಮಾತನಾಡುವ ಹಕ್ಕಿದೆ. ವಾದಿಸುವ ಅವಕಾಶವಿದೆ. ಸರಿ ತಪ್ಪುಗಳನ್ನು ವಿಮಶಿಸುವ ಸ್ವತಂತ್ರವಿದೆ. ಇದನ್ನು ರಾಷ್ಟ್ರ, ಸಂಸ್ಕೃತಿ, ಆಚರಣೆ ಇತ್ಯಾದಿ ಮಾನದಂಡಗಳಡಿ ಹತ್ತಿಕ್ಕುವ ಪ್ರಯತ್ನ ಬೇಡ. ಎಬಿವಿಪಿ ಕಾರ್ಯಕರ್ತರು ತಮ್ಮ ಮೇಲೆ ಕಲ್ಲುಗಳನ್ನು ಎಸೆದು ಗಾಯಗೊಳಿಸಬಹುದು. ಆದರೆ ನಮ್ಮ ತತ್ವಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಹುತಾತ್ಮ ಯೋಧನ ಪುತ್ರಿ ಬರೆದುಕೊಂಡಿದ್ದಾಳೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.