ಸಾಂದರ್ಭಿಕ ಚಿತ್ರ 
ದೇಶ

ಲಿವಿಂಗ್ ಟುಗೆದರ್ ಸಂಬಂಧ: ಸಂಗಾತಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ!

ಲಿವಿಂಗ್ ಟುಗೆದರ್ ಸಂಬಂಧದಲ್ಲಿದ್ದ ಇಬ್ಬರು ವಿವಾಹಿತರ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ರಾಜಧಾನಿ ದೆಹಲಿಯಲ್ಲಿ ಶನಿವಾರ ನಡೆದಿದೆ...

ನವದೆಹಲಿ: ಲಿವಿಂಗ್ ಟುಗೆದರ್ ಸಂಬಂಧದಲ್ಲಿದ್ದ ಇಬ್ಬರು ವಿವಾಹಿತರ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ರಾಜಧಾನಿ ದೆಹಲಿಯಲ್ಲಿ ಶನಿವಾರ ನಡೆದಿದೆ. 
ಲಿವಿಂಗ್ ಟುಗೆದರ್ ಸಂಬಂಧದಲ್ಲಿದ್ದ ವ್ಯಕ್ತಿಯೋರ್ವ ಕ್ಷುಲ್ಲಕ ಕಾರಣಕ್ಕೆ ತನ್ನ ಸಂಗಾತಿಯನ್ನು ಹತ್ಯೆ ಮಾಡಿದ ತಾನೂ ಕೂಡ ಅತ್ಮಹತ್ಯೆಗೆ ಯತ್ನಿಸಿದ್ದಾರೆ. 
ನೀರೂ (35) ಹತ್ಯೆಯಾದ ಮಹಿಳೆಯಾಗಿದ್ದು, ಜೋರ್ಸನ್ ಹತ್ಯೆ ಮಾಡಿದ ವ್ಯಕ್ತಿಯಾಗಿದ್ದಾನೆ. ಇಬ್ಬರೂ ಕಳೆದ 1 ವರ್ಷದಿಂದ ಸಹ ಜೀವನ ನಡೆಸುತ್ತಿದ್ದರು. ಇಬ್ಬರಿಗೂ ಮದುವೆಯಾಗಿದ್ದು, ನೀರೂ ತನ್ನ ಪತಿಯನ್ನು ಹಾಗೂ ಜೋರ್ಸನ್ ತನ್ನ ಪತ್ನಿಯನ್ನು ತೊರೆದಿದ್ದರು. ಅಂತೆಯೇ ವರ್ಷದಿಂದ ಇಬ್ಬರು ದೆಹಲಿಯ ದಾಬ್ರಿ ಪ್ರದೇಶದಲ್ಲಿ ಲಿವಿಂಗ್ ಟುಗೆದರ್ ಸಂಬಂಧದಲ್ಲಿದ್ದರು. 
ಶನಿವಾರ ಇಬ್ಬರ ನಡುವೆ ಯಾವುದೋ ಕ್ಷುಲ್ಲಕ ವಿಚಾರಕ್ಕೆ ವಾಗ್ವಾದ ನಡೆದು ಜಗಳ ಆರಂಭವಾಗಿದೆ. ಈ ವೇಳೆ ಮಾತು ತಾರಕ್ಕೇರಿದ ಕಾರಣ ನೀರೂ ಅವರ ಮೇಲೆ ತೀವ್ರವಾಗಿ ಕೋಪಗೊಂಡ ಜೋರ್ಸನ್ ಅವರು ನೀರೂಳನ್ನು ಕೊಂದು ಬಳಿಕ ತನ್ನ ಬಲಗೈಯನ್ನು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಪೊಲೀಸರಿಗೆ ಕರೆ ಮಾಡಿರುವ ಜೋರ್ಸನ್ ಕೊಲೆ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾನೆ. 
ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಜೋರ್ಸನ್ ನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಆರೋಪಿಯನ್ನು ಬಂಧನಕ್ಕೊಳಪಡಿಸಿರುವ ಪೊಲೀಸರು. ನೀರೂ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ. ವಿಜಯೇಂದ್ರ

ಗಂಡನ ಕೊಂದು ನೀಲಿ ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ ಗೆ ಮರಣದಂಡನೆ ಶಿಕ್ಷೆ!

'ಅಧರ್ಮ ಎಸಗಿದವರಿಗೆ ಶಿಕ್ಷೆ ನೀಡುವುದೂ ಧರ್ಮವೇ'; ಮೀರತ್ ಹತ್ಯೆ ಪ್ರಕರಣ ಶಿಕ್ಷೆ ಪ್ರಕಟ ವೇಳೆ ನ್ಯಾಯಾಧೀಶರಿಂದ ಭಗವದ್ಗೀತೆ ಉಲ್ಲೇಖ!

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ