ಲಖನೌ: ವಿಧಾನಸಭಾ ಚುನಾವಣೆ ನಡೆಯುತ್ತಿರುವ ಉತ್ತರ ಪ್ರದೇಶದಲ್ಲಿ ಫೆ.27 ರಂದು 5 ನೇ ಹಂತದ ಮತದಾನ ನಡೆಯಲಿದೆ. ನೇಪಾಳದೊಂದಿಗೆ ಗಡಿ ಹಂಚಿಕೊಂಡಿರುವ ಸೂಕ್ಷ್ಮ ಪ್ರದೇಶಗಳಲ್ಲಿ ಧ್ವಜ ಪಥಸಂಚಲನ ನಡೆಸಲಾಗಿದೆ.
11 ಜಿಲ್ಲೆಗಳ 51 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು, ಈ ಪೈಕಿ 5 ಜಿಲ್ಲೆಗಳು ನೇಪಾಳದೊಂದಿಗೆ ಗಡಿ ಹಂಚಿಕೊಂಡಿವೆ. 5 ನೇ ಹಂತದ ಮತದಾನದಲ್ಲಿ ಎಸ್ ಪಿಯ ಗಾಯತ್ರಿ ಪ್ರಸಾದ್ ಪ್ರಜಾಪತಿ, ಕಾಂಗ್ರೆಸ್ ನ ಅಮಿತ ಸಿಂಗ್ ಹಾಗೂ ಬಿಜೆಪಿಯ ಗರಿಮಾ ಸಿಂಗ್ ಸೇರಿದಂತೆ ಇನ್ನೂ ಹಲವು ಘಟಾನುಘಟಿಗಳ ಭವಿಷ್ಯ ನಿರ್ಧಾರವಾಗಲಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ 5 ನೇ ಹಂತದ ಮತದಾನ ನಡೆದಿದ್ದ 52 ವಿಧಾನಸಭಾ ಕ್ಷೇತ್ರಗಳಲ್ಲಿ 37 ವಿಧಾನಸಭಾ ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.