ಸಂಗ್ರಹ ಚಿತ್ರ 
ದೇಶ

ಅಧಿಕಾರಕ್ಕೇರಿದ ಬೆನ್ನಲ್ಲೇ "ಕಾವೇರಿ"ಗೆ ಕೈಹಾಕಿದ ಪಳನಿ ಸ್ವಾಮಿ; ಪ್ರಧಾನಿಗೆ ಪತ್ರ!

ವಿಶ್ವಾಸ ಮತ ಯಾಚನೆ ಬಳಿಕ ಅಧಿಕಾರಕ್ಕೇರಿದ ಶಶಿಕಲಾ ಬಣದ ಸಿಎಂ ಪಳನಿ ಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಕರ್ನಾಟಕದ ಬಹು ಉದ್ದೇಶಿತ ಮೇಕೆದಾಟು ಯೋಜನೆಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿದ್ದಾರೆ.

ನವದೆಹಲಿ: ಎಐಎಡಿಎಂಕೆ ಪಕ್ಷದ ಭಿನ್ನಮತ ಸ್ಫೋಟ ಹಾಗೂ ಬಳಿಕ ನಡೆದ ವಿಶ್ವಾಸ ಮತ ಯಾಚನೆ ಬಳಿಕ ಅಧಿಕಾರಕ್ಕೇರಿದ ಶಶಿಕಲಾ ಬಣದ ಸಿಎಂ ಪಳನಿ ಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು,  ಕರ್ನಾಟಕದ ಬಹು ಉದ್ದೇಶಿತ ಮೇಕೆದಾಟು ಯೋಜನೆಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿದ್ದಾರೆ.

"ಇತ್ತೀಚಿನ ಕೆಲ ಮಾಧ್ಯಮಗಳಲ್ಲಿನ ವರದಿಯಂತೆ ಕರ್ನಾಟಕ ಸರ್ಕಾರ ವಿವಾದಿತ ಪ್ರದೇಶದಲ್ಲಿ ಸುಮಾರು 5912 ಕೋಟಿ ರು.ವೆಚ್ಚದಲ್ಲಿ ಬಹು ಉದ್ದೇಶಿತ (ತುಡಿಯುವ ನೀರು ಹಾಗೂ ವಿದ್ಯುತ್) ಮೇಕೆದಾಟು ಯೋಜನೆಯನ್ನು  ಕೈಗೆತ್ತಿಕೊಂಡಿದ್ದು, ಸುಮಾರು 66 ಟಿಎಂಸಿ ಪ್ರಮಾಣದ ನೀರನ್ನು ಸಂಗ್ರಹಿಸಿಟ್ಟುಕೊಳ್ಳುವ ಸಾಮರ್ಥ್ಯದ ಡ್ಯಾಂ ನಿರ್ಮಾಣ ಮಾಡ ಹೊರಟಿದೆ. ಅಂತೆಯೇ ಕರ್ನಾಟಕ ಸರ್ಕಾರ ಈ ಬಗ್ಗೆ ಕೇಂದ್ರ ನೀರಾವರಿ ಸಚಿವಾಲಯಗಳ ಅನುಮತಿಗಾಗಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಕರ್ನಾಟಕ ಸರ್ಕಾರದ ಈ ವಿವಾದಿತ ಯೋಜನೆಯಿಂದಾಗಿ ತಮಿಳುನಾಡು ಜನತೆಯ ಹಿತಾಸಕ್ತಿಗೆ ಧಕ್ಕೆಯಾಗಲಿದೆ.

ತಮಿಳುನಾಡು ಕಾವೇರಿ ನಿರ್ವಹಣಾ ಮಂಡಳಿ ರಚನೆಗಾಗಿ ಕಾಯುತ್ತಿದ್ದು, ಇದು ಸುಪ್ರೀಂ ಕೋರ್ಟ್ ನಲ್ಲಿದೆ. ಹೀಗಾಗಿ ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೂ ಕಾವೇರಿ ಕೊಳ್ಳದಲ್ಲಿ ಸಂಬಂಧ ಪಟ್ಟ ರಾಜ್ಯಗಳು ಯಾವುದೇ  ಯೋಜನೆಗಳನ್ನು ಕೈಗೆತ್ತಿಕೊಳ್ಳುವಂತಿಲ್ಲ, ಹೀಗಿದ್ದೂ ಕರ್ನಾಟಕ ಸರ್ಕಾರ ಯೋಜನೆ ನಿರ್ಮಾಣಕ್ಕೆ ಮುಂದಾಗಿದ್ದು, ಇದು ನ್ಯಾಯಾಂಗ ನಿಂಧನೆಯಾಗುತ್ತದೆ. ಹೀಗಾಗಿ ಕರ್ನಾಟಕ ಸರ್ಕಾರದ ಮನವಿಯನ್ನು ತಿರಸ್ಕರಿಸಿ, ಯೋಜನೆಗೆ  ಅನುಮೋದನೆ ನೀಡದಂತೆ ಸಂಬಂಧ ಪಟ್ಟ ಇಲಾಖೆಗೆ ಸೂಚಿಸಬೇಕು ಎಂದು ತಮಿಳುನಾಡು ಸಿಎಂ ಪಳನಿಸ್ವಾಮಿ ಪ್ರಧಾನಿ ಮೋದಿ ಅವರಿಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ