ದೇಶ

ಎನ್ಎಚ್ಆರ್ ಸಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಏಪ್ರಿಲ್ 30ರೊಳಗೆ ಭರ್ತಿ ಮಾಡಲು ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಸೂಚನೆ

Sumana Upadhyaya
ನವದೆಹಲಿ: ರಾಷ್ಟ್ರೀಯ ಮಾನವ ಹಕ್ಕು ಆಯೋಗದಲ್ಲಿ ಖಾಲಿಯಿರುವ ಎರಡು ಹುದ್ದೆಗಳನ್ನು ಏಪ್ರಿಲ್ 30ರೊಳಗೆ ಭರ್ತಿ ಮಾಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೋಮವಾರ ನಿರ್ದೇಶನ ನೀಡಿದೆ.
ಸುಪ್ರೀಂ ಕೋರ್ಟ್ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ರಾಧಾಕಾಂತ ತ್ರಿಪಾಠಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ  ಮುಖ್ಯ ನ್ಯಾಯಾಧೀಶ ನ್ಯಾಯಮೂರ್ತಿ ಜಗದೀಶ್ ಸಿಂಗ್ ಖೆಹರ್ ಅವರ ನೇತೃತ್ವದ ನ್ಯಾಯಪೀಠ ಈ ಆದೇಶ ಹೊರಡಿಸಿದೆ.
ಕಳೆದ ಜನವರಿಯಲ್ಲಿ ಕೂಡ ಸುಪ್ರೀಂ ಕೋರ್ಟ್ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಮಹಾ ನಿರ್ದೇಶಕರ ಹುದ್ದೆಯನ್ನು ಮತ್ತು ಇತರ ಖಾಲಿಯುಳಿದಿರುವ ಹುದ್ದೆಗಳನ್ನು ವಾರದೊಳಗೆ ಭರ್ತಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು.
SCROLL FOR NEXT