ಸಾಂದರ್ಭಿಕ ಚಿತ್ರ 
ದೇಶ

ಪಂಜಾಬ್ ಜಾಗೃತ ದಳದಿಂದ ನಿವೃತ್ತ ಐಎಎಸ್ ಅಧಿಕಾರಿಯ ಬಂಧನ

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಐಎಎಸ್ ಅಧಿಕಾರಿ ಮಂದೀಪ್ ಸಿಂಗ್ ಅವರನ್ನು ಮಂಗಳವಾರ ಪಂಜಾಬ್....

ಮೊಹಾಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಐಎಎಸ್ ಅಧಿಕಾರಿ ಮಂದೀಪ್ ಸಿಂಗ್ ಅವರನ್ನು ಮಂಗಳವಾರ ಪಂಜಾಬ್ ಜಾಗೃತ ದಳ ಅಧಿಕಾರಿಗಳು ಬಂಧಿಸಿದ್ದಾರೆ.
ಮೂಲಗಳ ಪ್ರಕಾರ, ಜಾಗೃತ ದಳದ ಪೊಲೀಸರು ಸಿಂಗ್ ಅವರನ್ನು ಸೋಮವಾರ ಸಂಜೆ ವಿಚಾರಣೆಗಾಗಿ ಠಾಣೆಗೆ ಕರೆದಿದ್ದರು. ಈ ವೇಳೆ ನಿವೃತ್ತ ಐಎಎಸ್ ಅಧಿಕಾರಿಯನ್ನು ವಶಕ್ಕೆ ಪಡೆಯಲಾಗಿದೆ.
ಸಿಂಗ್ ಅವರನ್ನು ಇಂದು ಸ್ಥಳೀಯ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ಕೋರ್ಟ್ ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಬಳಿಕ ಸಿಂಗ್ ಅವರನ್ನು ಪಟಿಯಾಲ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ.
ಸಿಂಗ್ ಅವರನ್ನು ಪೊಲೀಸ್ ವಶಕ್ಕೆ ಪಡೆಯುವ ಅಗತ್ಯ ಇಲ್ಲ. ಅವರ ವಿರುದ್ಧ ನಮ್ಮ ಬಳಿ ಸಾಕಷ್ಟು ಸಾಕ್ಷ್ಯಗಳಿವೆ. ನಮ್ಮ ತನಿಖೆ ದಾಖಲೆ ಆಧಾರಿತವಾಗಿದೆ ಎಂದು ಜಾಗೃತ ದಳದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
1991ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದ ಸಿಂಗ್ ಅವರು ಭ್ರಷ್ಟಾಚಾರ ಮತ್ತು ಅಕ್ರಮ ಆಸ್ತಿ ಗಳಿಸಿದ ಆರೋಪ ಎದುರಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel