ನವದೆಹಲಿ: ದೆಹಲಿಯ ರಾಮಜಾಸ್ ಕಾಲೇಜಿನಲ್ಲಿ ಎಬಿವಿಪಿ ಹಾಗೂ ಎಐಎಸ್ಎ ವಿದ್ಯಾರ್ಥಿಗಳ ನಡುವಿನ ಸಂಘರ್ಷದ ವಿಷಯವಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಫೆ.28 ರಂದು ಲೆಫ್ಟಿನೆಂಟ್ ಗೌರ್ನರ್ ಅನಿಲ್ ಬೈಜಾಲ್ ಅವರನ್ನು ಭೇಟಿ ಮಾಡಲಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕೇಜ್ರಿವಾಲ್, ಎಬಿವಿಪಿ ವಿದ್ಯಾರ್ಥಿಗಳ ಸೂಚನೆಯಂತೆ ರಾಷ್ಟ್ರವಿರೋಧಿ ಘೋಷಣೆಗಳನ್ನು ಕೂಗಲಾಗಿದೆ ಎಂದು ಆರೋಪಿಸಿದ್ದು, ದೆಹಲಿ ವಿವಿ ವಿದ್ಯಾರ್ಥಿನಿಗೆ ಅತ್ಯಾಚಾರ ಬೆದರಿಕೆ ಹಾಕಲಾಗಿರುವ ಎಬಿವಿಪಿ ವಿದ್ಯಾರ್ಥಿ ಸಂಘಟನೆವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಲೆಫ್ಟಿನೆಂಟ್ ಗೌರ್ನರ್ ಗೆ ಮನವಿ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
1999 ರಲ್ಲಿ ಮೃತಪಟ್ಟ ಸೇನಾ ಕ್ಯಾಪ್ಟನ್ ಪುತ್ರಿ ಗುರ್ ಮೆಹರ್ ಕೌರ್ ದೆಹಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯಾಗಿದ್ದು, ರಾಮಜಾಸ್ ಕಾಲೇಜಿನ ಪ್ರಕರಣದ ನಂತರ ಎಬಿವಿಪಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಪ್ರಾರಂಭಿಸಿದ್ದರು. ಅಭಿಯಾನ ಪ್ರಾರಂಭವಾದ ನಂತರ ನನಗೆ ಹತ್ಯೆ ಹಾಗೂ ಅತ್ಯಾಚಾರದ ಆರೋಪ ಕೇಳಿಬರುತ್ತಿದೆ ಎಂದು ಗುರ್ ಮೆಹರ್ ಕೌರ್ ಆರೋಪಿಸಿದ್ದರು.