ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೇಂದ್ರ ಸಚಿವ ವೆಂಕಯ್ಯ ನಾಯ್ಡು 
ದೇಶ

ನಾಯ್ಡು ಹೇಳಿಕೆ ವಿರೋಧಿಸುವವರು ದೇಶವಿರೋಧಿಗಳಾಗುತ್ತಾರೆ: ಖರ್ಗೆ ವ್ಯಂಗ್ಯ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಿದ್ಧಾಂತಗಳನ್ನು ಹೇರಲು ಬಿಜೆಪಿ ಯತ್ನಿಸುತ್ತಿದ್ದು, ವಿಶ್ವವಿದ್ಯಾಲಯಗಳಲ್ಲಿ ನಡೆಯುತ್ತಿರುವ ಘಟನೆಗಳಿಗೆ ಭಿನ್ನತೆಯ ಬಣ್ಣ ನೀಡಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಕ ಮಲ್ಲಿಕಾರ್ಜುನ ಖರ್ಗೆಯವರು...

ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಿದ್ಧಾಂತಗಳನ್ನು ಹೇರಲು ಬಿಜೆಪಿ ಯತ್ನಿಸುತ್ತಿದ್ದು, ವಿಶ್ವವಿದ್ಯಾಲಯಗಳಲ್ಲಿ ನಡೆಯುತ್ತಿರುವ ಘಟನೆಗಳಿಗೆ ಭಿನ್ನತೆಯ ಬಣ್ಣ ನೀಡಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದಾರೆ. 
ವೆಂಕಯ್ಯ ನಾಯ್ಡು ಅವರು ನೀಡಿದ್ದ ಹೇಳಿಕೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ನಾಯ್ಡು ಅವರ ಹೇಳಿಕೆಯನ್ನು ವಿರೋಧಿಸುವವರು ಹಾಗೂ ಟೀಕಿಸುವ ಜನರು ದೇಶ ವಿರೋಧಿಗಳು ಹಾಗೂ ಭ್ರಷ್ಟ ವ್ಯಕ್ತಿಗಳಾಗಿ ಹೋಗುತ್ತಾರೆಂದು ವ್ಯಂಗ್ಯವಾಡಿದ್ದಾರೆ. 
ವೆಂಕಯ್ಯ ನಾಯ್ಡು ಅವರು ಯಾವಾಗಲೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಿದ್ಧಾಂತಗಳ ಬಗ್ಗೆಯೇ ಮಾತನಾಡುತ್ತಾರೆ. ಅವರ ಹೇಳಿಕೆಯನ್ನು ಯಾರಾದರೂ ವಿರೋಧಿಸಿದರೆ, ಅವರನ್ನು ದೇಶ ದ್ರೋಹಿಗಳು ಹಾಗೂ ಭ್ರಷ್ಟರೆಂಬ ಪಟ್ಟವನ್ನು ನೀಡಲಾಗುತ್ತದೆ. ತಾವು ಹೇಳುವ ಸಿದ್ಧಾಂತವನ್ನೇ ಸ್ವತಃ ನಾಯ್ಡು ಅವರೇ ಪಾಲನೆ ಮಾಡುವುದಿಲ್ಲ ಎಂದಿದ್ದಾರೆ. 
ಜಾತ್ಯತೀತತೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವ ಜನರು ತಮ್ಮ ಸಿದ್ಧಾಂತಗಳನ್ನು ತಾವೇ ಪಾಲನೆ ಮಾಡುವುದು ಕಷ್ಟವೆಂದು ತಿಳಿಯುತ್ತಾರೆ. ಇಂತಹ ಹೇಳಿಕೆಗಳನ್ನು ಸರಿಪಡಿಸಲು ಹೋದರೆ, ಅವರಿಗೆ ದೇಶ ವಿರೋಧಿ ಎನ್ನುತ್ತಾರೆ ಎಂದು ತಿಳಿಸಿದ್ದಾರೆ. 
ದೆಹಲಿಯ ರಾಮ್ಜಾಸ್ ಕಾಲೇಜಿನಲ್ಲಿ ನಡೆದಿದ್ದ ಘರ್ಷಣೆ ಪ್ರಕರಣ ಸಂಬಂಧ ನಿನ್ನೆಯಷ್ಟೇ ಪ್ರತಿಕ್ರಿಯೆ ನೀಡಿದ್ದ ವೆಂಕಯ್ಯ ನಾಯ್ಡು ಅವರು, ತಮ್ಮದೇ ದೇಶದಲ್ಲಿದ್ದುಕೊಂಡು ದೇಶದ ಪ್ರಧಾನಮಂತ್ರಿಗಳನ್ನು ಕತ್ತೆಗೆ ಹೋಲಿಕೆ ಮಾಡುತ್ತಿದ್ದೀರಿ. ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ ಎಂದು ಹೇಗೆ ಹೇಳುತ್ತಿರಾ? ಮತ್ತೊಬ್ಬರ ಅನಿಸಿಕೆ ಹಾಗೂ ಅಭಿಪ್ರಾಯಗಳಿಗೆ ಗೌರವ ನೀಡುವುದು ಅಭಿವ್ಯಕ್ತಿ ಸ್ವಾತಂತ್ರ್ಯ. ಮೂಲಭೂತ ಹಕ್ಕುಗಳಿಗೆ ಕಾಂಗ್ರೆಸ್ ಗೌರವ ನೀಡುತ್ತಿಲ್ಲ. ಇದೀಗ ಜನರ ಮನಸ್ಸಿನಲ್ಲಿ ವಿಷಬೀಜ ಬಿತ್ತುವ ಪ್ರಯತ್ನಗಳನ್ನು ಮಾಡುತ್ತಿದೆ. ಕೆಲ ಉಗ್ರಗಾಮಿ ಪಡೆಗಳು ಹಾಗೂ ಎಡಪಂಥೀಯರೊಡನೆ ಕೈಜೋಡಿಸಿರುವ ಕಾಂಗ್ರೆಸ್ ಹಿಂಸಾಚಾರ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು