ಐಜ್ವಾಲ್: ಮಿಜೊರಾಂ ನ ಖಾಸಗಿ ನರ್ಸಿಂಗ್ ಸ್ಕೂಲ್ ನ ನಿರ್ದೇಶಕರ ವಿರುದ್ಧ ವೈದ್ಯಕೀಯ ತಪಾಸಣೆ ವೇಳೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿಬಂದಿದೆ.
ನರ್ಸಿಂಗ್ ಸ್ಕೂಲ್ ನ 14 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಎದುರಿಸಿದ ಬಗ್ಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ನಿರ್ದೇಶಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ನರ್ಸಿಂಗ್ ಶಾಲೆಗೆ ಸೇರಬೇಕೆಂದು ಅರ್ಜಿ ಸಲ್ಲಿಸಿದ್ದ 14 ವಿದ್ಯಾರ್ಥಿನಿಯರು ಸೆಪ್ಟೆಂಬರ್ ನಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನೀಡಲಾಗಿತ್ತೆಂದು ದೂರಿನಲ್ಲಿ ಆರೋಪಿಸಿದ್ದಾರೆ.
ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿನಿಯರ ವೈದ್ಯಕೀಯ ತಪಾಸಣೆ ನಡೆಸುವ ವೇಳೆ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ವಿದ್ಯಾರ್ಥಿನಿಯರ ನೆರವಿಗೆ ಮಹಿಳಾ ಹಕ್ಕು ಕಾರ್ಯಕರ್ತರು ಧಾವಿಸಿದ್ದಾರೆ.