ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರದಲ್ಲಿ ಎನ್'ಕೌಂಟರ್: ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನೆ

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಿದ್ದಾರೆಂದು ಮಂಗಳವಾರ ಮೂಲಗಳಿಂದ...

ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಿದ್ದಾರೆಂದು ಮಂಗಳವಾರ ಮೂಲಗಳಿಂದ ತಿಳಿದುಬಂದಿದೆ.

ಕಳೆದ ರಾತ್ರಿ ಉಗ್ರರು ಓಡಾಡುತ್ತಿರುವುದಾಗಿ ಅನುಮಾನಗಳು ವ್ಯಕ್ತವಾಗಿದ್ದವು. ಈ ಹಿನ್ನಲೆಯಲ್ಲಿ ಹರಿತಾರ್'ನ ಸೋಪೋರ್ ಪ್ರದೇಶದಲ್ಲಿ ಸೇನೆ ಕಾರ್ಯಾಚರಣೆಗಿಳಿದಿತ್ತು. ಈ ವೇಳೆ ಎನ್ ಕೌಂಟರ್ ನಡೆಸಿ ಉಗ್ರನೊಬ್ಬನನ್ನು ಹತ್ಯೆ ಮಾಡಿದೆ ಎಂದು ಹೇಳಲಾಗುತ್ತಿದೆ.

ಸ್ಥಳದಲ್ಲಿ ಅನುಮಾನಾಸ್ಪದ ಓಡಾಟಗಳು ಕಂಡುಬಂದಿತ್ತು. ಕಾರ್ಯಾಚರಣೆಗಿಳಿದಾಗ ಸೇನೆ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಭದ್ರತಾ ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!