ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ 
ದೇಶ

ಬಿಜೆಪಿ ಎಂದಿಗೂ ಧ್ರುವೀಕರಣ ರಾಜಕೀಯ ಮಾಡಿಲ್ಲ: ರಾಜನಾಥ್ ಸಿಂಗ್

ಬಿಜೆಪಿ ಎಂದಿಗೂ ಧ್ರುವೀಕರಣ ರಾಜಕೀಯದಲ್ಲಿ ಭಾಗಿಯಾಗಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಮಂಗಳವಾರ ಹೇಳಿದ್ದಾರೆ...

ನವದೆಹಲಿ: ಬಿಜೆಪಿ ಎಂದಿಗೂ ಧ್ರುವೀಕರಣ ರಾಜಕೀಯದಲ್ಲಿ ಭಾಗಿಯಾಗಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಮಂಗಳವಾರ ಹೇಳಿದ್ದಾರೆ.

ಯಾವುದೇ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಜಾತಿ, ಮತ ಮತ್ತು ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡುವಂತಿಲ್ಲ ಎಂದು ನಿನ್ನೆಯಷ್ಟೇ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು.

ತೀರ್ಪು ಸಂಬಂಧ ಇಂದು ಪ್ರತಿಕ್ರಿಯೆ ನೀಡಿರುವ ರಾಜನಾಥ ಸಿಂಗ್ ಅವರು, ಧರ್ಮದ ಕುರಿತು ನಾವು ಚರ್ಚೆ ಮಾಡಬಹುದು. ಧರ್ಮಕ್ಕೂ ಅದರದ್ದೇ ಆದ ಜವಾಬ್ದಾರಿಯಿರುತ್ತದೆ. ಸುಪ್ರೀಂಕೋರ್ಟ್ ಆದೇಶವನ್ನು ನಾನು ಒಪ್ಪುತ್ತೇನೆ. ಧರ್ಮ ಹಾಗೂ ಜಾತಿ ಆಧಾರದ ಮೇಲೆ ಎಂದಿಗೂ ರಾಜಕೀಯವನ್ನು ಮಾಡಬಾರದು, ಬಿಜೆಪಿ ಎಂದಿಗೂ ಧ್ರುವೀಕರಣ ರಾಜಕೀಯವನ್ನು ಮಾಡಿಲ್ಲ ಎಂದು ಹೇಳಿದ್ದಾರೆ.

ಇದೇ ವೇಳೆ ಸಮಾಜವಾದಿ ಪಕ್ಷದಲ್ಲಿನ ಬಿರುಕು ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಅಪ್ಪ, ಮಗನ ನಡುವಿನೆ ಕಿತ್ತಾಟ ಒಳ್ಳೆಯ ಬೆಳವಣಿಯಲ್ಲ ಎಂದು ತಿಳಿಸಿದ್ದಾರೆ.

ಮಣಿಪುರ ಗಲಭೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಹಿಂದಿನ ಪರಿಸ್ಥಿತಿಗೆ ಹೋಲಿಸಿದರೆ ಪ್ರಸ್ತುತ ಪರಿಸ್ಥಿತಿ ಸುಧಾರಿಸಿದೆ. ಪರಿಸ್ಥಿತಿ ಕುರಿತಂತೆ ಈಗಾಗಲೇ ಮಣಿಪುರ ಮುಖ್ಯಮಂತ್ರಿಗಳ ಜೊತೆಗೆ ಮಾತುಕತೆ ನಡೆಸಲಾಗಿದ್ದು, ದಿಗ್ಬಂಧನ ಹಿಂದಕ್ಕೆ ಪಡೆಯುವಂತೆ ತಿಳಿಸಲಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!