ವಿಜಯವಾಡ ಆಸ್ಪತ್ರೆಯಲ್ಲಿ ಅಗ್ನಿ ಅವಘಡ
ಆಂಧ್ರಪ್ರದೇಶದ ವಿಜಯವಾಡದ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು,...
ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡದ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು, ಪ್ರಾಣ ಹಾನಿ ಹಾಗೂ ಆಸ್ತಿ ಹಾನಿ ಬಗ್ಗೆ ತಕ್ಷಣಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸೆಂಥಿನಿ ಸೂಪರ್ ಸ್ಪೆಸಿಯಾಲಿಟಿ ಆಸ್ಪತ್ರೆಯ ಮೊದಲನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅವರು ಹೇಳಿದ್ದಾರೆ.
ಅಗ್ನಿ ಆಕಸ್ಮಿಕದಿಂದಾಗಿ ರೋಗಿಗಳು ಹಾಗೂ ಅವರನ್ನು ನೋಡಿಕೊಳ್ಳುವ ದಾದಿಯರು ತೀವ್ರ ಆತಂಕಕ್ಕೆ ಒಳಗಾಗಿದ್ದು, ರೋಗಿಗಳ ಸಂಬಂಧಿಕರು ಹಾಗೂ ಆಸ್ಪತ್ರೆ ಸಿಬ್ಬಂದಿ ಅವರನ್ನು ಕಟ್ಟಡದಿಂದ ಸ್ಥಳಾಂತರಿಸಲು ಪರದಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ ರಕ್ಷಣಾ ಸಿಬ್ಬಂದಿ ಆಂಬುಲೆನ್ಸ್ ಮೂಲಕ ರೋಗಿಗಳನ್ನು ಬೆರೆ ಆಸ್ಪತ್ರೆಗೆ ಸ್ಥಳಾಂತರಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದು, ಕಟ್ಟಡದ ಒಂದು ಭಾಗಕ್ಕೆ ಹಾನಿಯಾಗಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.