ದೇಶ

ಸುದೀಪ್ ಬಂಡೋಪಧ್ಯಾಯ ಬಂಧನಕ್ಕೆ ಮಮತಾ ಖಂಡನೆ, ಪ್ರತಿಭಟನೆಗೆ ನಿರ್ಧಾರ

Srinivas Rao BV
ಕೋಲ್ಕತಾ: ರೋಸ್ ವ್ಯಾಲಿ ಚಿಟ್ ಫಂಡ್ ಹಗರಣದ ಸಂಬಂಧ ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯ ಬಂಧನವನ್ನು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಖಂಡಿಸಿದ್ದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದು, ರಾಷ್ಟ್ರಾದ್ಯಂತ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಬಂಧಿಸಬೇಕೆಂದು ಹೇಳಿದ್ದಾರೆ. 
" ನೋಟು ನಿಷೇಧವನ್ನು ವಿರೊಧಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಮ್ಮ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗಿದೆ. ಕೇಂದ್ರ ಸರ್ಕಾರದ ದ್ವೇಷ ರಾಜಕೀಯವನ್ನು ನಾವು ವಿರೋಧಿಸುತ್ತೇವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. 
ರೋಸ್ ವ್ಯಾಲಿ ಚಿಟ್ ಫಂಡ್ ಹಗರಣದ ಸಂಬಂಧ ಡಿಸೆಂಬರ್ 3ರಂದು ಟಿಎಂಸಿ ಸಂಸದ ತಪಸ್ ಪಾಲ್ ಅವರನ್ನು ಬಂಧಿಸಿದ್ದ ಸಿಬಿಐ ಜ.3 ರಂದು ಸಿಬಿಐ ಕಚೇರಿಗೆ ವಿಚಾರಣೆಗೆ ಆಗಮಿಸಿದ್ದ ತೃಣಮೂಲ ಕಾಂಗ್ರೆಸ್ ಸಂಸದೀಯ ನಾಯಕ ಸುದೀಪ್ ಬಂಡೋಪಧ್ಯಾಯ ಅವರನ್ನು ವಶಕ್ಕೆ ಪಡೆದಿದೆ.
SCROLL FOR NEXT