ಚೆನ್ನೈ: ದ್ರಾವಿಡ ಮುನ್ನೇತ್ರ ಕಜ್ಹಗಮ್(ಡಿಎಂಕೆ) ನಾಯಕ ಎಂ.ಕೆ.ಸ್ಟಾಲಿನ್ ಅವರು ಬುಧವಾರ ಪಕ್ಷದ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಸ್ಟಾಲಿನ್ ಅವರನ್ನು ಆಯ್ಕೆ ಮಾಡಲಾಯಿತು.
ಡಿಸೆಂಬರ್ 20ರಂದು ನಡೆಯಬೇಕಾಗಿದ್ದ ಪಕ್ಷದ ಸಾಮಾನ್ಯ ಮಂಡಳಿ ಸಭೆ ಕರುಣಾನಿಧಿ ಅಸೌಖ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರಿಂದ ರದ್ದುಗೊಂಡಿತ್ತು.ಕರುಣಾನಿಧಿಯವರ ಗೈರು ಹಾಜರಿಯಲ್ಲಿ ಇಂದು ನಡೆದ ಸಭೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ. ಅನ್ಬಲಗನ್ ಅಧ್ಯಕ್ಷತೆ ವಹಿಸಿದ್ದರು.
ತಮಿಳುನಾಡು ಮುಖ್ಯಮಂತ್ರಿಯಾಗಿ ವಿ.ಕೆ.ಸಸಿಕಲಾ ಅಧಿಕಾರ ಸ್ವೀಕರಿಸಬೇಕೆಂದು ಎಐಎಡಿಎಂಕೆ ನಾಯಕರು ಒತ್ತಾಯ ಮಾಡುತ್ತಿರುವ ಸಂದರ್ಭದಲ್ಲಿ ಡಿಎಂಕೆ ಮುಖ್ಯಸ್ಥರಾಗಿ ಸ್ಟಾಲಿನ್ ಅಧಿಕಾರ ಸ್ವೀಕರಿಸಿರುವುದಕ್ಕೆ ಮಹತ್ವ ಬಂದಿದೆ.