ಬಿಜೆಪಿ ನಾಯಕಿ ಕೃಷ್ಣ ಭಟ್ಟಾಚಾರ್ಯ ನಿವಾಸದ ಮೇಲೆ ಟಿಎಂಸಿ ದಾಳಿ 
ದೇಶ

ಬಿಜೆಪಿ ನಾಯಕಿ ಕೃಷ್ಣ ಭಟ್ಟಾಚಾರ್ಯ ನಿವಾಸದ ಮೇಲೆ ಟಿಎಂಸಿ ಕಾರ್ಯಕರ್ತರ ದಾಳಿ

ರೋಸ್ ವ್ಯಾಲಿ ಚಿಟ್ ಫಂಡ್ ಹಗರಣದ ಸಂಬಂಧ ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯ ಅವರನ್ನು ಬಂಧನಕ್ಕೊಳಪಡಿಸುತ್ತಿದ್ದಂತೆ ಪಶ್ಚಿಮಬಂಗಾಳದಲ್ಲಿ ರಾಜಕೀಯ ಹಗ್ಗಜಗ್ಗಾಟ ತಾರಕ್ಕೇರಿದೆ...

ಕೋಲ್ಕತಾ: ರೋಸ್ ವ್ಯಾಲಿ ಚಿಟ್ ಫಂಡ್ ಹಗರಣದ ಸಂಬಂಧ ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯ ಅವರನ್ನು ಬಂಧನಕ್ಕೊಳಪಡಿಸುತ್ತಿದ್ದಂತೆ ಪಶ್ಚಿಮಬಂಗಾಳದಲ್ಲಿ ರಾಜಕೀಯ ಹಗ್ಗಜಗ್ಗಾಟ ತಾರಕ್ಕೇರಿದೆ.

ನಿನ್ನೆಯಷ್ಟೇ ಬಿಜೆಪಿ ಕಚೇರಿ ಮೇಲೆ ದಾಳಿ ನಡೆಸಿ ಬಿಜೆಪಿ ಕಾರ್ಯಕರ್ತರ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಇದಾದ ಬಳಿಕ ಕಳೆದ ರಾತ್ರಿ ಬಿಜೆಪಿ ನಾಯಕಿ ಕೃಷ್ಣ ಭಟ್ಟಾಚಾರ್ಯ ಅವರ ನಿವಾಸದ ಮೇಲೂ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದು, ಭಟ್ಟಾಚಾರ್ಯ ಅವರನ್ನು ಥಳಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಕೋಲ್ಕತಾದ ಉತ್ತರ್ಪಾರ ಪ್ರದೇಶದಲ್ಲಿರುವ ಭಟ್ಟಾಚಾರ್ಯ ಅವರ ನಿವಾಸದ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಇದಲ್ಲದೆ, ಭಟ್ಟಾಚಾರ್ಯ ಅವರ ನಿವಾಸದ ಮೇಲೆ ಬಾಂಬ್ ಎಸೆದಿರುವುದಾಗಿಯೂ ವರದಿಗಳು ತಿಳಿಸಿವೆ.

ಕಳೆದ ರಾತ್ರಿ 9.30ರ ಸುಮಾರಿಗೆ ಟಿಎಂಸಿ ಪಕ್ಷದ ಕಾರ್ಯಕರ್ತರು ಮನೆಯ ಮೇಲೆ ದಾಳಿ ನಡೆಸಿದ್ದರು. ಕಣ್ಣ ಎದುರಿಗೇ ಮನೆ ಮೇಲೆ ಬಾಂಬ್ ಎಸೆದಿದ್ದರು. ಅಲ್ಲದೆ, ನನ್ನನ್ನು ಹಿಗ್ಗಾಮುಗ್ಗಾ ಥಳಿಸಿದ್ದರು. ಕೆಲ ನಿಮಿಷದ ಬಳಿಕ ನಾನು ಪ್ರಜ್ಞೆಕಳೆದುಕೊಂಡಿದ್ದೆ ಎಂದು ಕೃಷ್ಣ ಭಟ್ಟಾಚಾರ್ಯ ಅವರು ಹೇಳಿಕೊಂಡಿದ್ದಾರೆ.

ಗಾಯಗೊಂಡ ಕೃಷ್ಣ ಭಟ್ಟಾಚಾರ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT