ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 
ದೇಶ

ಕಾರ್ಯಕರ್ತರ ಮೇಲೆ ದಾಳಿ: ಮಮತಾ ವಿರುದ್ಧ ಪ್ರತಿಭಟನೆಗೆ ಬಿಜೆಪಿ ನಿರ್ಧಾರ

ಕಚೇರಿಗೆ ನುಗ್ಗಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವುದಕ್ಕೆ ಬಿಜೆಪಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ವಿರುದ್ಧ ಕೋಲ್ಕತಾ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ಬುಧವಾರ...

ಕೋಲ್ಕತಾ: ಕಚೇರಿಗೆ ನುಗ್ಗಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವುದಕ್ಕೆ ಬಿಜೆಪಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ವಿರುದ್ಧ ಕೋಲ್ಕತಾ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ಬುಧವಾರ ತೀರ್ಮಾನಿಸಿದೆ.

ನಿನ್ನೆಯಷ್ಟೇ ಬಿಜೆಪಿ ಕಚೇರಿಗೆ ನುಗ್ಗಿದ್ದ ತೃಣಮೂಲಕ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದರು.

ದಾಳಿಗೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಬಿಜೆಪಿ ಮುಖಂಡ ರಾಹುಲ್ ಸಿನ್ಹಾ ಅವರು, ಪಕ್ಷದ ಕಾರ್ಯಕರ್ತ ಮೇಲೆ ದಾಳಿ ಮಾಡಿರುವುದನ್ನು ಬಿಜೆಪಿ ಖಂಡಿಸುತ್ತದೆ. ಈ ರೀತಿಯ ಬೆಳವಣಿಗೆಗಳು ಪ್ರಜಾಪ್ರಭುತ್ವಕ್ಕೆ ಬೆದರಿಕೆಯನ್ನೊಡ್ಡತ್ತದೆ. ಮಮತಾ ಅವರ ವಿರುದ್ಧ ರಾಜ್ಯದಾದ್ಯಂತ ಬಿಜೆಪಿ ಇಂದಿನಿಂದ ತೀವ್ರವಾಗಿ ಪ್ರತಿಭಟನೆ ನಡೆಸಲಿದೆ. ಪ್ರತಿಭಟನೆ ವೇಳೆ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿಯವರನ್ನು ಭೇಟಿಯಾಗಿ ಘಟನೆ ಕುರಿತಂತೆ ವಿವರ ನೀಡಲಿದ್ದೇವೆಂದು ಹೇಳಿದ್ದಾರೆ.

ಬಿಜೆಪಿ ಕಚೇರಿ ಮೇಲೆ ದಾಳಿ ಮಾಡಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುತ್ತಿದ್ದರೂ, ಪೊಲೀಸರು ಮಾತ್ರ ಮೂಕ ಪ್ರೇಕ್ಷಕರಂತೆ ನೋಡುತ್ತಿದ್ದರು. ರೋಸ್ ವ್ಯಾಲಿ ಚಿಟ್ ಫಂಡ್ ಹಗರಣದ ಸಂಬಂಧ ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯ ಅವರನ್ನು ಬಂಧನಕ್ಕೊಳಪಡಿಸಿದ ಬಳಿಕ ಮಮತಾ ಅವರು ಹೇಳಿಕೆಯನ್ನು ನೀಡಿದ್ದರು. ಮಮತಾ ಹೇಳಿಕೆ ಮುಗಿಯುತ್ತಿದ್ದಂತೆ ಸಾವಿರಾರು ಟಿಎಂಸಿ ಪಕ್ಷದ ಕಾರ್ಯಕರ್ತರು ನಮ್ಮ ಕಚೇರಿ ಮೇಲೆ ದಾಳಿ ಮಾಡಿದ್ದರು. ದಾಳಿಯಲ್ಲಿ ಬಿಜೆಪಿಯ ಸಾಕಷ್ಟು ಕಾರ್ಯಕರ್ತರು ಗಾಯಗೊಂಡಿದ್ದಾರೆ.

ಇದು ಯಾವ ರೀತಿಯ ನಾಟಕ? ಪ್ರಜಾಪ್ರಭುತ್ವದ ಎಲ್ಲಾ ನಿಯಮವಾಳಿಗಳನ್ನು ಟಿಎಂಸಿ ಮುರಿದಿದ್ದು, ನಮ್ಮ ಮೇಲೆ ದಾಳಿ ನಡೆಸಿದೆ. ಈ ರೀತಿಯ ಚಟುವಟಿಕೆಗಳನ್ನು ನಿಲ್ಲಿಸುವಂತೆ ಈ ಮೂಲಕ ಮಮತಾ ಅವರ ಬಳಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ಇಲ್ಲದೆ ಹೋದರೆ, ಮಮತಾ ಅವರು ತಮ್ಮ ಕೈಯಿಂದ ತಾವೇ ತಮ್ಮ ವರ್ಚಸ್ಸನ್ನು ಹಾಳು ಮಾಡಿಕೊಳ್ಳುತ್ತಾರೆ.

ಟಿಎಂಸಿ ನಡೆಸಿದ ದಾಳಿಯಂತೆ ನಾವು ದಾಳಿ ನಡೆಸುವುದಿಲ್ಲ. ಟಿಎಂಸಿ ಹಾಗೂ ಆಡಳಿತಾರೂಢ ಪಕ್ಷ ಹೇಗಿದೆ ಎಂಬುದನ್ನು ಜನತೆಗೆ ದೋರಿಸುವುದು ನಮಗೆ ಬೇಕಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT