ಸಾಂದರ್ಭಿಕ ಚಿತ್ರ 
ದೇಶ

ಬೆಂಗಳೂರು ಸಾಮೂಹಿಕ ಲೈಂಗಿಕ ದೌರ್ಜನ್ಯ: 8 ಮಂದಿ ಬಂಧನ

ಹೊಸ ವರ್ಷಾಚರಣೆ ದಿನದಂದು ಕಮ್ಮನಹಳ್ಳಿಯಲ್ಲಿ ಯುವತಿಯೊಬ್ಬಳ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಪೊಲೀಸರು ಈ ವರೆಗೂ 8 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆಂದು...

ಬೆಂಗಳೂರು: ಹೊಸ ವರ್ಷಾಚರಣೆ ದಿನದಂದು ಕಮ್ಮನಹಳ್ಳಿಯಲ್ಲಿ ಯುವತಿಯೊಬ್ಬಳ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಪೊಲೀಸರು ಈ ವರೆಗೂ 8 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆಂದು ಗುರುವಾರ ತಿಳಿದುಬಂದಿದೆ.

ಹೊಸ ವರ್ಷದ ಆರಂಭವಾಗುವುದಕ್ಕೂ ಹಿಂದಿನ ದಿನ ಸಂಭ್ರಮಾಚರಣೆ ವೇಳೆ ಎಂ.ಜಿ. ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಕೆಲ ಕಿಡಿಗೇಡಿಗಳು ಯುವತಿಯರ ಮೇಲೆ ಸಾಮೂಹಿಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂಬ ಆರೋಪಗಳು ಕೇಳಿಬಂದಿತ್ತು. ಈ ಪ್ರಕರಣಕ್ಕೆ ರಾಜ್ಯ ಮತ್ತು ರಾಷ್ಟ್ರದಾದ್ಯಂತ ತೀವ್ರ ಖಂಡನೆಗಳು ವ್ಯಕ್ತವಾಗುತ್ತಿದೆ. ಇದರ ನಡುವೆಯೇ ಕಮ್ಮನಹಳ್ಳಿಯಲ್ಲಿ ಉತ್ತರ ಭಾರತದ ಮೂಲದವರು ಎನ್ನಲಾದ ಯುವತಿಯೊಬ್ಬರನ್ನು ನಡುರಸ್ತೆಯಲ್ಲಿಯೇ ತಡೆದು ಲೈಂಗಿಕ ಕಿರುಕುಳ ನೀಡಲಾಗಿದೆ. ಘಟನೆ ನಡೆದ ಸ್ಥಳದಲ್ಲಿದ್ದ ಮನೆಯೊಂದರ ಹೊರಗೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ವಿಡಿಯೋ ಸೆರೆಯಾಗಿತ್ತು. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದ್ದು, ಮಹಿಳಾಪರ ಸಂಘಟನೆಗಳು ಸೇರಿದಂತೆ ಎಲ್ಲೆಡೆ ವ್ಯಾಪಕ ವಿರೋಧಗಳು ವ್ಯಕ್ತವಾಗತೊಡಗಿವೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸರ್ ಆಯುಕ್ತ ಹೇಮಂತ್ ನಿಂಬಾಲ್ಕರ್ ಅವರು, ಪೂರ್ವ ವಿಭಾಗದ ಡಿಸಿಪಿ ಅಜಯ್ ಹಿಲ್ಲೋರಿ ಮತ್ತು ಈಶಾನ್ಯ ವಿಭಾಗದ ಪಿ.ಎಸ್. ಹರ್ಷ ಅವರ ನೇತೃತ್ವದಲ್ಲಿ ತಂಡವನ್ನು ರಚಿಸಿದ್ದರು. ಘಟನೆ ನಡೆದ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಮೊಬೈಲ್ ಟವರ್ ಲೋಕೇಷನ್ ಆಧರಿಸಿ 12 ಮಂದಿಯನ್ನು ಬಂಧನಕ್ಕೊಳಪಡಿಸಿ ವಿಚಾರಣೆಗೊಳಪಡಿಸಿದ್ದರು. ವಿಚಾರಣೆ ಬಳಿಕ ನಾಲ್ವರನ್ನು ಬಿಡುಗಡೆ ಮಾಡಿದ್ದು, ಇನ್ನೂ 8 ಮಂದಿಯೊಡನೆ ವಿಚಾರಣೆ ಮುಂದುವರೆಸಿದ್ದಾರೆಂದು ತಿಳಿದುಬಂದಿದೆ.

ಆರೋಪಿಗಳು ಸ್ಥಳೀಯರೇ ಆಗಿರಬೇಕು. ಯುವತಿಗೆ ಆ ಹುಡುಗರು ತಿಳಿದವರೇ ಆಗಿರಬೇಕು ಇಲ್ಲವೇ ಘಟನೆಗೂ ಮುನ್ನ ಮೊದಲೇ ನೋಡಿರಬೇಕು. ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುವುದಕ್ಕೂ ಮುನ್ನ ಆರೋಪಿಗಳು ಅವರನ್ನು ಹಿಂಬಾಲಿಸಿದ್ದಾರೆ. ಹೊೆಸ ವರ್ಷದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡ ಬಳಿಕ ಯುವತಿ ಆಟೋದಲ್ಲಿ ಪ್ರಯಾಣ ಬೆಳೆಸಿದ್ದರು. ಈ ವೇಳೆ ಮೂರು ದ್ವಿಚಕ್ರ ವಾಹನಗಳಲ್ಲಿ ಬಂದ 6 ಮಂದಿ ದುಷ್ಕರ್ಮಿಗಳು, ಆಟೋವನ್ನು ಹಿಂಬಾಲಿಸಿದ್ದಾರೆ. ಮಾರ್ಗದ ಮಧ್ಯೆ ಆಟೋವನ್ನು ತಡೆದು ಯುವತಿಯರಿಗೆ ಹೊಸ ವರ್ಷದ ಶುಭಾಶಯ ಹೇಳಇದ್ದಾರೆ. ನಂತರವೂ ಯುವತಿಯರಿದ್ದ ಆಟೋವನ್ನು ಹಿಂಬಾಲಿಸಿದ್ದಾರೆ. ಈ ನಡುವೆ ಒಬ್ಬ ಯುವತಿ ಆಟೋ ಇಳಿದು ಮನೆಗೆ ಹೋಗಿದ್ದಾರೆ. ಆದರೆ, ಮತ್ತೊಬ್ಬ ಯುವತಿ ಕಮ್ಮನಹಳ್ಳಿಯ 5ನೇ ಮುಖ್ಯರಸ್ತೆಯಲ್ಲಿ ಇಳಿದು ಮನೆ ಕಡೆಗೆ ನಡೆದು ಹೋಗುವಾಗ ಆರು ಮಂದಿ ದುಷ್ಕರ್ಮಿಗಳ ಪೈಕಿ ಇಬ್ಬರು ಮುಂದೆ ಬಂದು ಲೈಂಗಿಕ ದೌರ್ಜನ್ಯ ನಡೆಸಿ ಪರಾರಿಯಾಗಿದ್ದಾರೆಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT