ದೇಶ

ಜಾತಿ, ಧರ್ಮದ ಆಧಾರದಲ್ಲಿ ಮತಯಾಚನೆ ಬೇಡ: ಸುಪ್ರೀಂ ಆದೇಶ ಸ್ವಾಗತಿಸಿದ ಯೋಗಿ ಆದಿತ್ಯಾನಾಥ್

Manjula VN

ಗೋರಾಖ್ಪುರ: ರಾಜಕೀಯ ಪಕ್ಷಗಳು ಜಾತಿ ಮತ್ತು ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಕೂಡದು ಎಂಬ ಸುಪ್ರೀಂಕೋರ್ಟ್ ಆದೇಶವನ್ನು ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರು ಸ್ವಾಗತಿಸಿದ್ದಾರೆ.

ಸುಪ್ರೀಂಕೋರ್ಟ್ ಆದೇಶ ಕುರಿತಂತೆ ಇಂದು ಪ್ರತಿಕ್ರಿಯೆ ನೀಡಿರುವ ಅವರು, ಸುಪ್ರೀಂಕೋರ್ಟ್ ಆದೇಶ ಸ್ವಾಗತಾರ್ಹ. ಜನಪ್ರತಿನಿಧಿ ಕಾಯ್ದೆಯಲ್ಲಿ ಜಾತಿ ಮತ್ತು ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡುವ ರಾಜಕೀಯ ಗಣ್ಯರ ಸಂಖ್ಯೆ ಕಡಿಮೆಯಿದೆ. ಆದರೆ, ಆದೇಶ ಕುರಿತಂತೆ ಮತ್ತಷ್ಟು ವಿವರಣೆಗಳ ಅಗತ್ಯವಿದೆ ಎಂದು ಹೇಳಿದ್ದಾರೆ.

ಭಾರತೀಯ ಸಂವಿಧಾನ ಜಾತ್ಯಾತೀತವಾಗಿದ್ದು, ಜಾತಿ, ಧರ್ಮ, ಸಮುದಾಯ ಮತ್ತು ಭಾಷೆಯ ಆಧಾರದ ಮೇಲೆ ಮತಯಾಚನೆ ಮಾಡುವುದು ನಿಲ್ಲಬೇಕಿದೆ ಎಂತು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಸುಪ್ರೀಂಕೋರ್ಟ್ ಮಹತ್ವದ ಆದೇಶವೊಂದನ್ನು ಹೊರಹಾಕಿತ್ತು. ಯಾವುದೇ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಜಾತಿ, ಮತ ಮತ್ತು ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡುವಂತಿಲ್ಲ ಎಂದು ತೀರ್ಪು ನೀಡಿತ್ತು.

SCROLL FOR NEXT