ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 
ದೇಶ

ಚುನಾವಣೆ ಆಸುಪಾಸಿನಲ್ಲೇ ಬಜೆಟ್ ದಿನಾಂಕ: ಚುನಾವಣಾ ಆಯೋಗದೊಂದಿಗೆ ವಿಪಕ್ಷಗಳ ಚರ್ಚೆ

ಪಂಚ ರಾಜ್ಯಗಳ ಚುನಾವಣೆ ಆಸುಪಾಸಿನಲ್ಲೇ ಕೇಂದ್ರ ಬಜೆಟ್ ದಿನಾಂಕವನ್ನು ನಿಗದಿ ಮಾಡಿರುವುದಕ್ಕೆ ವಿರೋಧಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಬಜೆಟ್ ದಿನಾಂಕ ಕುರಿತಂತೆ ಚುನಾವಣಾ ಆಯೋಗದ ಬಳಿ ಚರ್ಚೆ ನಡೆಸಲು ವಿರೋಧ ಪಕ್ಷಗಳು...

ಕೋಲ್ಕತಾ: ಪಂಚ ರಾಜ್ಯಗಳ ಚುನಾವಣೆ ಆಸುಪಾಸಿನಲ್ಲೇ ಕೇಂದ್ರ ಬಜೆಟ್ ದಿನಾಂಕವನ್ನು ನಿಗದಿ ಮಾಡಿರುವುದಕ್ಕೆ ವಿರೋಧಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಬಜೆಟ್ ದಿನಾಂಕ ಕುರಿತಂತೆ ಚುನಾವಣಾ ಆಯೋಗದ ಬಳಿ ಚರ್ಚೆ ನಡೆಸಲು ವಿರೋಧ ಪಕ್ಷಗಳು ಗುರುವಾರ ನಿರ್ಧರಿಸಿವೆ ಎಂದು ತಿಳಿದುಬಂದಿದೆ.

ತೃಣಮೂಲ ಕಾಂಗ್ರೆಸ್ ಪಕ್ಷ, ಕಾಂಗ್ರೆಸ್, ಸಮಾಜವಾದಿ ಪಕ್ಷ, ಬಹುಜನ ಸಮಾಜವಾದಿ ಪಕ್ಷ, ಸಂಯುಕ್ತ ಜನತಾದಳ ಪಕ್ಷ, ರಾಷ್ಟ್ರೀಯ ಜನತಾದಳ ಪಕ್ಷ ಹಾಗೂ ಇನ್ನಿತರೆ ವಿರೋಧಗಳು ಇಂದು ಚುನಾವಣಾ ಆಯೋಗದ ಬಳಿ ಚರ್ಚೆ ನಡೆಸಲು ನಿರ್ಧರಿಸಿವೆ ಎಂದು ಹೇಳಲಾಗುತ್ತಿದೆ.

ಈ ಕುರಿತಂತೆ ಕಾಂಗ್ರೆಸ್ ನಾಯಕ ಡೆರೆಕ್ ಒಬ್ರೇನ್ ಅವರು ಟ್ವಿಟರ್ ನಲ್ಲಿ ಹೇಳಿಕೊಂಡಿದ್ದು, ತೃಣಮೂಲಕ ಕಾಂಗ್ರೆಸ್ ಪಕ್ಷದಿಂದ ಮೂವರು ನಾಯಕರು ದೆಹಲಿಯ ಚುನಾವಣಾ ಆಯೋಗಕ್ಕೆ ಹೋಗುತ್ತಿದ್ದೇವೆಂದು ಹೇಳಿಕೊಂಡಿದ್ದಾರೆ.
 
ನಿನ್ನೆಯಷ್ಟೇ ಪಂಚ ರಾಜ್ಯಗಳ ವಿಧಾನಸಭೆ ದಿನಾಂಕವನ್ನು ಚುನಾವಣಾ ಆಯೋಗ ಘೋಷಣೆ ಮಾಡಿತ್ತು. ಉತ್ತರಪ್ರದೇಶ, ಗೋವಾ, ಉತ್ತರಾಖಂಡ್, ಮಣಿಪುರ ಹಾಗೂ ಪಂಜಾಬ್ ರಾಜ್ಯಗಳ ಚುನಾವಣಾ ದಿನಾಂಕವನ್ನು ಆಯೋಗ ಘೋಷಣೆ ಮಾಡಿತ್ತು. ಇದರೆ ನಡುವೆಯೇ ಕೇಂದ್ರ ಕೂಡ ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡನೆ ಮಾಡಲು ನಿರ್ಧರಿಸಿತ್ತು. ಇದಕ್ಕೆ ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಚುನಾವಣೆ ಆಸುಪಾಸಿನಲ್ಲಿಯೇ ಬಜೆಟ್ ಮಂಡನೆ ದಿನಾಂಕವಿದ್ದು, ಬಜೆಟ್ ದಿನಾಂಕವನ್ನು ಮುಂದೂಡಬೇಕೆಂದು ಆಗ್ರಹಿಸುತ್ತಿವೆ.

ಏಪ್ರಿಲ್ 1 ರಿಂದ ಆರ್ಥಿಕ ವರ್ಷ ಆರಂಭವಾಗಲಿದ್ದು, ಇದರೊಳಗಾಗಿಯೇ ಸಾಕಷ್ಟು ಯೋಜನೆಗಳಿಗೆ ಸರ್ಕಾರ ಹಣವನ್ನು ಮೀಸಲಿಡಬೇಕಿದೆ. ಹೀಗಾಗಿ ಬಜೆಟ್ ನ್ನು ಆರ್ಥಿಕ ವರ್ಷದ ಆರಂಭವಾಗುವುದಕ್ಕೂ ಮುನ್ನ ಮಂಡನೆ ಮಾಡಬೇಕಿದೆ ಎಂದು ಸರ್ಕಾರ ಹೇಳುತ್ತಿದೆ.

ಬಜೆಟ್ ದಿನಾಂಕ ಕುರಿತಂತೆ ಪ್ರತಿಕ್ರಿಯೆ ನೀಡಿದ್ದ ಮುಖ್ಯ ಚುನಾವಣಾ ಆಯುಕ್ತ ನಸೀಂ ಜೈದಿ ಅವರು, ಬಜೆಟ್ ಮಂಡನೆ ಸಾಂವಿಧಾನಿಕವಾದ ಪ್ರಕ್ರಿಯೆಯಾಗಿದ್ದು, ಬಜೆಟ್ ಮಂಡನೆಗೆ ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ. ಪ್ರಚಾರದಲ್ಲಿ ಧರ್ಮದ ಬಳಕೆಗೆ ಅವಕಾಶವಿರುವುದಿಲ್ಲ. ಧರ್ಮದ ಆಧಾರದಲ್ಲಿ ಮತ ಕೇಳಲು ಅವಕಾಶ ಇಲ್ಲ ಎಂದು ಇತ್ತೀಚೆಗಷ್ಟೇ ಸುಪ್ರೀಂ ತೀರ್ಪು ನೀಡಿತ್ತು. ಇದರ ಅನುಷ್ಠಾನಕ್ಕೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದೇನೆ. ಸುಪ್ರೀಂ ತೀರ್ಪು ಜಾರಿಗೆ ತರಲು ಅನುಕೂಲವಾಗುವಂತೆ ನಿರ್ದೇಶನಗಳನ್ನು ಸಿದ್ಧಪಡಿಸಲಾಗುತ್ತಿದೆ. ಇದರಂತೆ ಮಾರ್ಚ್ 11 ರಿಂದ ಪಂಚ ರಾಜ್ಯಗಳಲ್ಲಿ ಚುನಾವಣಾ ಪ್ರಕ್ರಿಯೆಗಳು ಆರಂಭವಾಗಲಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ