ಮಧ್ಯಪ್ರದೇಶದಲ್ಲಿ ಶೂಟೌಟ್: ಕಾಂಗ್ರೆಸ್ ಮುಖಂಡನ ಕಗ್ಗೊಲೆ
ಅಪರಿಚಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಗೆ ಕಾಂಗ್ರೆಸ್ ಮುಖಂಡ ನ ಕೊಲೆಯಾಗಿದ್ದು ಮತ್ತೋರ್ವ ತೀವ್ರವಾಗಿ ಗಾಯಗೊಂಡಿದ್ದಾನೆ.
ಜಬಲ್ ಪುರ: ಅಪರಿಚಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಗೆ ಕಾಂಗ್ರೆಸ್ ಮುಖಂಡ ನ ಕೊಲೆಯಾಗಿದ್ದು ಮತ್ತೋರ್ವ ತೀವ್ರವಾಗಿ ಗಾಯಗೊಂಡಿದ್ದಾನೆ.
ಮಧ್ಯ ಪ್ರದೇಶದ ಜಬಲ್ ಪುರದಲ್ಲಿ ನಿನ್ನೆ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಕಾಂಗ್ರೆಸ್ ಮುಖಂಡ ರಾಜು ಮಿಶ್ರಾ ಸಾವನ್ನಪ್ಪಿದ್ದಾರೆ, ಮತ್ತೊರ್ವ ಕುಕ್ಕು ಸರ್ದಾರ್ ಎಂಬಾತ ಗಾಯಗೊಂಡಿದ್ದು ಆತನಿಗೆ ಚಿಕಿತ್ಸೆ ಕೊಡಿಸಲಾಗಿದೆ.
ನಿನ್ನೆ ರಾತ್ರಿ ಸುಮಾರು 10 ಗಂಟೆ ವೇಳೆಯಲ್ಲಿ ದುಷ್ಕರ್ಮಿಗಳು 14 ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಸಂತ್ರಸ್ತರು ಹೋಟೆಲ್ ಬಳಿ ನಿಂತಿದ್ದರು. ಹಿಂದಿನಿಂದ ಬಂದ ಆರೋಪಿಗಳು ಕೃತ್ಯ ನಡೆಸಿದ್ದಾರೆ.
ರಕ್ತದ ಮಾದರಿ ಹಾಗೂ ಬುಲೆಟ್ ಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ದಾಳಿಗೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.