ಪಣಜಿ: ಗೋವಾದ ಆಡಳಿತಾರೂಢ ಬಿಜೆಪಿ ಸರ್ಕಾರದ ಮಿತ್ರ ಪಕ್ಷವಾದ ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷ (ಎಂಜಿಪಿ) ಬಿಜೆಪಿಯೊಂದಿಗಿನ ಮೈತ್ರಿಯನ್ನು ಕಡಿದುಕೊಂಡಿದೆ.
ಎಂಜಿಪಿ ಅಧ್ಯಕ್ಷ ದೀಪಕ್ ಧಾವಳೀಕರ್ ಬಿಜೆಪಿಯೊಂದಿಗಿನ ಮೈತ್ರಿಯನ್ನು ಅಂತ್ಯಗೊಳಿಸಿರುವ ಬಗ್ಗೆ ಸ್ಪಷ್ಟನೆ ನೀಡಿದ್ದು, ಆರ್ ಎಸ್ಎಸ್ ನ ಭಿನ್ನಮತೀಯ ನಾಯಕ ಸುಭಾಷ್ ವೆಲಿಂಗರ್ ಅವರ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಗೋವಾ ವಿಧಾನಸಭಾ ಚುನಾವಣೆಯಲ್ಲಿ 40 ವಿಧಾನಸಭಾ ಕ್ಷೇತ್ರಗಳ ಪೈಕಿ 22 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.
ಬಿಜೆಪಿಯೊಂದಿಗಿನ ಮೈತ್ರಿಯನ್ನು ಅಂತ್ಯಗೊಳಿಸಿರುವ ಬಗ್ಗೆ ಧಾವಳೀಕರ್ ಅವರು ಗೋವಾ ರಾಜ್ಯಪಾಲ ಮೃದುಲಾ ಸಿನ್ಹಾ ಅವರಿಗೆ ಪತ್ರ ಬರೆದಿದ್ದು, ಭಿನ್ನಾಭಿಪ್ರಾಯಗಳ ಹೊರತಾಗಿಯೂ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದ್ದೆವು. ಆದರೆ ಭಿನ್ನಾಭಿಪ್ರಾಯಗಳ ಪರಿಣಾಮದಿಂದಾಗಿ ಸರ್ಕಾರದಲ್ಲಿದ್ದ ನಮ್ಮ ಪಕ್ಷದ ಹಲವು ಸಚಿವರನ್ನು ವಜಾಗೊಳಿಸಲಾಗಿದೆ ಎಂದು ಗೋವಾ ವಿಧಾನಸಭಾಧ್ಯಕ್ಷರಾದ ಅನಂತ್ ಶೇಠ್ ಗೆ ತಲುಪಿಸಲಾಗಿರುವ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದು, ಮುಂದಿನ ವಿಧಾನಸಭಾ ಚುನಾವಣೆಗೆ ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುಂದುವರೆಸುವುದಿಲ್ಲ ಎಂದು ದೀಪಲ್ ಧಾವಳೀಕರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics