ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಬಿಹಾರ: ಮದ್ಯ ನಿಷೇಧಿಸಿದ್ದಕ್ಕೆ ನಿತೀಶ್ ಕುಮಾರ್ ನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ

ಸಿಎಂ ನಿತೀಶ್ ಕುಮಾರ್ ಅವರೊಂದಿಗೆ ವೇದಿಕೆ ಹಂಚಿಕೊಂಡ ಪ್ರಧಾನಿ ನರೇಂದ್ರ ಮೋದಿ ನಿತೀಶ್ ಕುಮಾರ್ ಅವರ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಿತೀಶ್ ಕುಮಾರ್
Srinivas Rao BV
Updated On : 5 Jan 2017, 4:40 am
ಪಾಟ್ನಾ: ಗುರು ಗೋವಿಂದ್ ಸಿಂಗ್ ಅವರ 350 ನೇ ಜಯಂತಿ ಅಂಗವಾಗಿ ಬಿಹಾರದಲ್ಲಿ ಆಯೋಜಿಸಲಾಗಿದ್ದ ಪ್ರಕಾಶ್ ಉತ್ಸವದಲ್ಲಿ ಸಿಎಂ ನಿತೀಶ್ ಕುಮಾರ್ ಅವರೊಂದಿಗೆ ವೇದಿಕೆ ಹಂಚಿಕೊಂಡ ಪ್ರಧಾನಿ ನರೇಂದ್ರ ಮೋದಿ ನಿತೀಶ್ ಕುಮಾರ್ ಅವರ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 
ಬಿಹಾರದಲ್ಲಿ ಪ್ರಕಾಶ್ ಉತ್ಸವ ಆಯೋಜಿಸಿರುವುದಕ್ಕೆ ಹಾಗೂ ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧ ಮಾಡಿರುವ ನಿತೀಶ್ ಕುಮಾರ್ ನೇತೃತ್ವದ ಸರ್ಕಾರವನ್ನು ಪ್ರಧಾನಿ ನರೇಂದ್ರ ಮೋದಿ ಹೊಗಳಿದ್ದು, ಮದ್ಯ ನಿಷೇಧ ಮಾಡಿರುವ ನಿತೀಶ್ ಕುಮಾರ್ ಅವರ ಕ್ರಮವನ್ನು ಪಕ್ಷಾತೀತವಾಗಿ ಬೆಂಬಲಿಸಬೇಕೆಂದು ಕರೆ ನೀಡಿದ್ದಾರೆ. 
ಪ್ರಕಾಶ್ ಉತ್ಸವವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರಕಾಶ್ ಉತ್ಸವವನ್ನು ಆಯೋಜಿಸಿರುವ ಬಿಹಾರದ ಸಿಎಂ ನಿತೀಶ್ ಕುಮಾರ್, ಬಿಹಾರದ ಜನತೆ ಅಭಿನಂದನಾರ್ಹರು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  ಬಿಹಾರವನ್ನು ಮದ್ಯಮುಕ್ತವಾಗಿಸುವುದಕ್ಕೆ ನಿತೀಶ್ ಕುಮಾರ್ ಮದ್ಯ ನಿಷೇಧ ಕ್ರಮ ಕೈಗೊಂಡಿರುವುದು ದಿಟ್ಟ ನಿರ್ಧಾರವಾಗಿದೆ. ಸಾಮಾಜಿಕ ಬದಲಾವಣೆಗಾಗಿ ಕಠಿಣ ನಿರ್ಧಾರಗಳನ್ನು ಕೈಗೊಳ್ಳುವುದು ಸವಾಲಿನ ಸಂಗತಿಯಾಗಿದೆ.  ನಿತೀಶ್ ಕುಮಾರ್ ರಾಜ್ಯದಲ್ಲಿ ಮದ್ಯವನ್ನು ಸಂಪೂರ್ಣವಾಗಿ ನಿಷೇಧಿಸುವ ಮೂಲಕ ಅಂತಹ ನಿರ್ಧಾರ ಕೈಗೊಂಡಿದ್ದಾರೆ ಪಕ್ಷಾತೀತವಾಗಿ ಎಲ್ಲರೂ ಸ್ವಾಗತಿಸಬೇಕೆಂದು ಕರೆ ನೀಡಿದ್ದಾರೆ. 

Advertisement

Advertisement

ಪ್ರಕಾಶ್ ಉತ್ಸವದಲ್ಲಿ ಪಂಜಾಬ್ ನ ಸಿಎಂ ಪ್ರಕಾಶ್ ಸಿಂಗ್ ಬಾದಲ್, ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್, ರವಿಶಂಕರ್ ಪ್ರಸಾದ್ ಭಾಗವಹಿಸಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments