ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ 
ದೇಶ

ವೈದ್ಯರ ಮೇಲೆ ಹಲ್ಲೆ: ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಅನಾರೋಗ್ಯ ಪೀಡಿತರಾಗಿದ್ದ ತಾಯಿಗೆ ಸೂಕ್ತ ಚಿಕಿತ್ಸೆ ನೀಡಲಿಲ್ಲ ಎಂದು ಆರೋಪಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ಅವರ ವಿರುದ್ಧ ಶುಕ್ರವಾರ ಪ್ರಕರಣ ದಾಖಲಾಗಿದೆ ಎಂದು ಮೂಲಗಳು...

ನವದೆಹಲಿ: ಅನಾರೋಗ್ಯ ಪೀಡಿತರಾಗಿದ್ದ ತಾಯಿಗೆ ಸೂಕ್ತ ಚಿಕಿತ್ಸೆ ನೀಡಲಿಲ್ಲ ಎಂದು ಆರೋಪಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದ  ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ಅವರ ವಿರುದ್ಧ ಶುಕ್ರವಾರ ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.

ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಅನಂತ್ ಕುಮಾರ್ ಹೆಗ್ಡೆಯವರ ತಾಯಿಯನ್ನು ಸಿರ್ಸಿಯಲ್ಲಿರುವ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದರೆ, ವೈದ್ಯರು ತಾಯಿಗೆ ಸೂಕ್ತ ರೀತಿಯ ಚಿಕಿತ್ಸೆ ಕೊಡುತ್ತಿಲ್ಲ ಎಂದು ಆರೋಪಿಸಿ ಅನಂತ್ ಕುಮಾರ್ ಅವರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದರು. ವೈದ್ಯರ ಮೇಲೆ ಹಲ್ಲೆ ನಡೆಸುತ್ತಿದ್ದ ದೃಶ್ಯಾವಳಿಗಳು ಸ್ಥಳೀಯ ಸಿಸಿಟಿವಿಯಲ್ಲಿ ದಾಖಲಾಗಿತ್ತು. ಈ ವಿಡಿಯೋ ಸಾಕಷ್ಟು ವಿರೋಧಗಳಿಗೆ ಕಾರಣವಾಗಿತ್ತು. ಅಲ್ಲದೆ, ಮಂಗಳೂರಿನ ವೈದ್ಯ ಸಂಘಟನೆಗಳು ತೀವ್ರ ಆಕ್ರೋಶಗಳನ್ನು ವ್ಯಕ್ತಪಡಿಸಿತ್ತು.

ಪ್ರಕರಣ ಸಂಬಂಧ ಯಾವುದೇ ಅಧಿಕೃತ ದೂರುಗಳು ದಾಖಲಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಇದೀಗ ಸಂಸದ ಅನಂತ್ ಕುಮಾರ್ ಅವರ ವಿರುದ್ಧ 'ಸುವೋ-ಮೋಟೊ' (ಸ್ವಯಂ ಪ್ರೇರಿತ) ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಪ್ರಜಾಪ್ರಭುತ್ವ ಉಳಿಸಿ': CJP Protest ಬೆಂಬಲಿಸಿ ಸಂವಿಧಾನದ ಪ್ರಸ್ತಾವನೆ ಓದಿದ ಸುಪ್ರೀಂ ಕೋರ್ಟ್ ವಕೀಲರು!

ಮುಂಗಾರು ಅಧಿವೇಶನ: ಪ್ರತಿಪಕ್ಷಗಳ NEET ಬಿಸಿಗೆ ಕೇಂದ್ರ ತಲ್ಲಣ; ಉಭಯ ಸದನ 4ನೇ ದಿನಕ್ಕೆ ಮುಂದೂಡಿಕೆ!

CJP Protest: ಹೊಸ ಮಾತುಕತೆಯ ಪ್ರಸ್ತಾಪ ಮುಂದಿಟ್ಟ ಕೇಂದ್ರ ಸರ್ಕಾರ, ಪ್ರತಿಭಟನಾಕಾರರು ಎಲ್ಲಿ ಹೇಳ್ತಾರೋ ಅಲ್ಲಿಯೇ ಚರ್ಚೆಗೆ ಸಿದ್ಧ- ಜೀತೇಂದ್ರ ಸಿಂಗ್!

CJP ಪ್ರತಿಭಟನೆಗೆ ಅಣ್ಣಾ ಹಜಾರೆ ಎಂಟ್ರಿ: ಕಣ್ಣೀರು ಮೂಲಕ ಮೌನ ಚಳುವಳಿ ಆರಂಭ, Video!

ಅತಿಯಾಗಿ ಕಾಫಿ ಕುಡಿತೀರಾ? ಹುಷಾರ್, ಮುಂದೆ ಈ ಸಮಸ್ಯೆ ಎದುರಾಗಬಹುದು! Neurosurgeon ಸಲಹೆ ಏನು?