ಬೆಂಗಳೂರು-ದೆಹಲಿ ಸ್ಪೈಸ್ ಜೆಟ್ ವಿಮಾನ ತುರ್ತು ಭೂಸ್ಪರ್ಶ
ಬೆಂಗಳೂರು-ದೆಹಲಿ ಮಾರ್ಗದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷ ಸಮಸ್ಯೆಯಿಂದಾಗಿ ತುರ್ತು ಭೂಸ್ಪರ್ಶ ಮಾಡಿದೆ....
ನವದೆಹಲಿ: ಬೆಂಗಳೂರು-ದೆಹಲಿ ಮಾರ್ಗದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷ ಸಮಸ್ಯೆಯಿಂದಾಗಿ ತುರ್ತು ಭೂಸ್ಪರ್ಶ ಮಾಡಿದೆ.
176 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸ್ಪೈಸ್ ಜೆಟ್ ಎಸ್ ಜಿ 136 ವಿಮಾನ ಇಂದು ಬೆಳಗ್ಗೆ 8.45ರ ಸುಮಾರಿಗೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ವಿಮಾನದಲ್ಲಿ ಹೈಡ್ರಾಲಿಕ್ ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷದ ಕಾರಣ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನ ತುರ್ತು ಭೂಸ್ಪರ್ಶ ವಿಮಾನದಲ್ಲಿದ್ದ ಯಾವುದೇ ಪ್ರಯಾಣಿಕರು ತೊಂದರೆಯಾಗಿಲ್ಲ ಎಂದು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.