ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರದಲ್ಲಿ ಎನ್'ಕೌಂಟರ್: ಅಲ್ ಬದರ್ ಉಗ್ರ ಮುಜಫರ್ ಅಹಮದ್ ಹತ್ಯೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ನಿಷೇಧಿತ ಅಲ್-ಬದರ್ ಉಗ್ರ ಸಂಘಟನೆಯ ಭಯೋತ್ಪಾದಕ ಮುಜಫರ್ ಅಹಮದ್ ನನ್ನು ಹತ್ಯೆ ಮಾಡಿರುವುದಾಗಿ ಶುಕ್ರವಾರ...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ನಿಷೇಧಿತ ಅಲ್-ಬದರ್ ಉಗ್ರ ಸಂಘಟನೆಯ ಭಯೋತ್ಪಾದಕ ಮುಜಫರ್ ಅಹಮದ್ ನನ್ನು ಹತ್ಯೆ ಮಾಡಿರುವುದಾಗಿ ಶುಕ್ರವಾರ ಮೂಲಗಳು ತಿಳಿಸಿವೆ.

ಜಮ್ಮು ಕಾಶ್ಮೀರದ ಬುದ್ಗಮ್ ಜಿಲ್ಲೆ ಮಚು ಪ್ರದೇಶದಲ್ಲಿ ಇಂದು ಬೆಳಿಗ್ಗೆ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಉಗ್ರ ಮುಜಫರ್ ಅಹಮದ್ ನನ್ನು ಹತ್ಯೆ ಮಾಡಿದೆ. ಹತ್ಯೆಯಾದ ಉಗ್ರ ಮುಜಫರ್ ಅಹಮದ್ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯೊಂದಿಗೆ ಸೇರಿಕೊಂಡು ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ.

ಖಚಿತ ಮಾಹಿತಿ ಆಧಾರದ ಮೇಲೆ ಇಂದು ಬೆಳಗಿನ ಜಾವದಿಂದಲೇ ಭಾರತೀಯ ಸೇನೆ ಉಗ್ರರ ವಿರುದ್ಧ ಕಾರ್ಯಾಚರಣೆಗಿಳಿದಿತ್ತು. ಇದರಂತೆ ಉಗ್ರ ಮುಜಫರ್ ಅಹಮದ್ ನನ್ನು ಹತ್ಯೆ ಮಾಡಲಾಗಿದೆ.

ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಗುಲ್ಜಾರ್ಪೊರ ಗ್ರಾಮದ ಬಳಿ ಅಡಗಿ ಕುಳಿತಿರುವುದಾಗಿ ಮಾಹಿತಿ ತಿಳಿದುಬಂದಿತ್ತು. ಇದರಂತೆ ಸೇನಾಪಡೆ ಇಂದು ಬೆಳಿಗ್ಗೆ ಕಾರ್ಯಾಚರಣೆಗಿಳಿದಿತ್ತು. ಮುಜಾಫರ್ ಅಹಮದ್ ನೈಕು ಅಲಿಯಾಸ್ ಮುಜು ಮೊಲ್ವಿ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ. ಈ ವೇಳೆ ಬಹಳ ಹತ್ತಿರದಿಂದಲೇ ಸೇನಾ ಪಡೆ ಉಗ್ರರನ್ನು ಎನ್ ಕೌಂಟರ್ ನಡೆಸಿ ಹತ್ಯೆ ಮಾಡಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಸ್ತುತ ಸೇನಾ ಪಡೆ ತನ್ನ ಕಾರ್ಯಾಚರಣೆಯನ್ನು ಮುಂದುವರೆಸುತ್ತಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!