ಬಾಗ್ಪತ್: ಅತ್ಯಾಚಾರಕ್ಕೆ ವಿರೋಧ ವ್ಯಕ್ತ ಪಡಿಸಿದ್ದಕ್ಕೆ ನಾಲ್ವರು ಕಾಮುಕರು ಬಾಲಕಿಯ ಕಿವಿ ಕತ್ತರಿಸಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬಾಗ್ಪಾತ್ ನಲ್ಲಿ ನಡೆದಿದೆ.
ಜನವರಿ 4 ರಂದು ಬಾಲಕಿಯನ್ನು ಮನೆಗೆ ನುಗ್ಗಿದ ನಾಲ್ವರು ಆರೋಪಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ಆಕೆ ಇದಕ್ಕೆ ತೀವ್ರ ವಿರೋಧ ವ್ಯಕ್ತ ಪಡಿಸಿದ ಹಿನ್ನೆಲೆಯಲ್ಲಿ ಕಿವಿ ಕತ್ತರಿಸಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಸಂಸದ ಸತ್ಯಪಾಲ್ ಸಿಂಗ್, ಅತ್ಯಾಚಾರ ಯತ್ನ ನಡೆದಿಲ್ಲ, ದೂರಿನಲ್ಲಿ ಸತ್ಯಾಂಶವಿಲ್ಲ ಎಂದು ಹೇಳಿದ್ದಾರೆ. ನಾನು ಸ್ಥಳೀಯ ಎಸ್ಪಿ ಜೊತೆ ಮಾತನಾಡಿದ್ದೇನೆ. ಜನವರಿ 31 ರಂದು ನೆರೆಹೊರೆಯವರ ನಡುವೆ ಜಗಳ ನಡೆದಿದೆ, ಆದರೆ ಆವತ್ತಿನ ದಿನ ದೂರು ನೀಡದೇ ಮೂರು ನಾಲ್ಕು ದಿನ ಕಳೆದ ಮೇಲೆ ದರು ನೀಡಿದ್ದಾರೆ. ಈ ದೂರಿನಲ್ಲಿ ಸತ್ಯಾಂಶವಿಲ್ಲ ಎಂದು ನನಗೆ ಅನ್ನಿಸಿದೆ ಎಂದು ಅವರು ತಿಳಿಸಿದ್ದಾರೆ.