ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ 
ದೇಶ

ಮಕ್ಕಳಿಲ್ಲದ ನನಗೆ ಸರ್ಕಾರ ಪ್ರಶಸ್ತಿ ಕೊಡಬೇಕು; ಸಾಕ್ಷಿ ಮಹಾರಾಜ್

ಜನಸಂಖ್ಯೆ ಹೆಚ್ಚಳ ಕುರಿತಂತೆ ಮುಸ್ಲಿಮರ ವಿರುದ್ಧ ಹೇಳಿಕೆ ನೀಡಿ ಈಗಾಗಲೇ ಸಾಕಷ್ಟು ಟೀಕೆಗಳನ್ನು ಎದುರಿಸುತ್ತಿರುವ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅವರು ಮತ್ತೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಮಕ್ಕಳಿಲ್ಲದ ನನಗೆ ಸರ್ಕಾರ ಪ್ರಶಸ್ತಿಯನ್ನು ಕೊಡಬೇಕೆಂದು ಶನಿವಾರ...

ಉನ್ನಾವೋ: ಜನಸಂಖ್ಯೆ ಹೆಚ್ಚಳ ಕುರಿತಂತೆ ಮುಸ್ಲಿಮರ ವಿರುದ್ಧ ಹೇಳಿಕೆ ನೀಡಿ ಈಗಾಗಲೇ ಸಾಕಷ್ಟು ಟೀಕೆಗಳನ್ನು ಎದುರಿಸುತ್ತಿರುವ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅವರು ಮತ್ತೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಮಕ್ಕಳಿಲ್ಲದ ನನಗೆ ಸರ್ಕಾರ ಪ್ರಶಸ್ತಿಯನ್ನು ಕೊಡಬೇಕೆಂದು ಶನಿವಾರ ಹೇಳಿದ್ದಾರೆ.

ದಿನದಿಂದ ದಿನಕ್ಕೆ ದೇಶದಲ್ಲಿ ಜನಸಂಖ್ಯೆ ಹೆಚ್ಚುತ್ತಲೇ ಇದೆ. ಮಹಿಳೆಯರು ಮಕ್ಕಳನ್ನು ಹೆರುವ ಯಂತ್ರವಲ್ಲ. ನಾಲ್ವರು ಪತ್ನಿಯರು, 40 ಮಕ್ಕಳು ಹಾಗೂ ಮೂರು ವಿಚ್ಛೇದನ ಪಡೆದವರನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ನನಗೆ ನಾಲ್ವರು ಸಹೋದರರಿದ್ದಾರೆ, ನಾವು ನಾಲ್ಕು ಸಹೋದರರೂ ಮದುವೆಯಾಗಿಲ್ಲ. ನಮಗೆ ಯಾವ ಮಕ್ಕಳೂ ಇಲ್ಲ. ಹೀಗಾಗಿ ಮಕ್ಕಳಿಲ್ಲದ ನಮಗೆ ಸರ್ಕಾರ ಪ್ರಶಸ್ತಿಯನ್ನು ನೀಡಬೇಕೆಂದು ತಿಳಿಸಿದ್ದಾರೆ.

ನಿನ್ನೆಯಷ್ಟೇ ಉತ್ತರಪ್ರದೇಶದಲ್ಲಿ ಹೇಳಿಕೆ ನೀಡಿದ್ದ ಸಾಕ್ಷಿ ಮಹಾರಾಜ್ ಅವರು, ದೇಶದಲ್ಲಿ ಜನಸಂಖ್ಯೆ ಏರಿಕೆಯಾಗಲು ನಾಲ್ಕು ಪತ್ನಿಯರು, 40 ಮಕ್ಖಳು ಹೊಂದಬೇಕೆಂಬ ಪರಿಕಲ್ಪನೆಯನ್ನು ಅನುಸರಿಸುತ್ತಿರುವವರೇ ಕಾರಣರಾಗಿದ್ದು, ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಬೇಕಿದೆ. ಮಹಿಳೆಯರು ಕೇವಲ ಮಕ್ಕಳನ್ನು ಹೆರುವ ಯಂತ್ರಗಳಲ್ಲ. ತಾಯಿಯಂದಿರು ಹಿಂದೂಗಳೇ ಆಗಲಿ ಮುಸ್ಲಿಮರೇ ಅಗಲೀ ಅವರಿಗೆ ಗೌರವ ನೀಡಬೇಕೆಂದು ಹೇಳಿದ್ದರು.

ಈ ಹೇಳಿಕೆಗೆ ಹಲವು ವಿರೋಧ ಪಕ್ಷಗಳು ಸಾಕಷ್ಟು ಟೀಕೆಗಳನ್ನು ವ್ಯಕ್ತಪಡಿಸಿತ್ತು. ಧಾರ್ಮಿಕ ಹಾಗೂ ಜಾತಿ ಆಧಾರಿತವಾಗಿ ಸಾಕ್ಷಿ ಮಹಾರಾಜ್ ಅವರು ಹೇಳಿಕೆಯನ್ನು ನೀಡಿದ್ದಾರೆ. ಇದು ಕಾನೂನು ಬಾಹಿರವಾಗಿದ್ದು, ಸುಪ್ರೀಂ ಆದೇಶಕ್ಕೆ ವಿರುದ್ಧವಾಗಿದೆ. ಹೇಳಿಕೆ ಸಂಬಂಧ ಕಾಂಗ್ರೆಸ್ ಚುನಾವಣಾ ಆಯೋಗದ ಬಳಿ ಹೋಗುತ್ತಿದ್ದು, ಬಿಜೆಪಿ ನಾಯಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಿದೆ ಎಂದು ಕಾಂಗ್ರೆಸ್ ಹೇಳಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ