ದೇಶ

ಉ.ಪ್ರದೇಶ ಚುನಾವಣೆ: ಬಿಎಸ್ಪಿಯ 100 ಅಭ್ಯರ್ಥಿಗಳ 3ನೇ ಪಟ್ಟಿ ಪ್ರಕಟಿಸಿದ ಮಾಯಾವತಿ

Lingaraj Badiger
ಲಖನೌ: ಬಹುಜನ ಸಮಾಜ ಪಕ್ಷ(ಬಿಎಸ್ಪಿ)ದ ಮುಖ್ಯಸ್ಥೆ ಮಾಯಾವತಿ ಅವರು ಶನಿವಾರ ತಮ್ಮ ಪಕ್ಷದ 24 ಮುಸ್ಲಿಂ ಅಭ್ಯರ್ಥಿಗಳು ಸೇರಿದಂತೆ 100 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. 
ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಎಸ್ಪಿ ಇದುವರೆಗೆ 300 ಅಭ್ಯರ್ಥಿಗಳನ್ನು ಘೋಷಿಸಿದ್ದು, ಒಟ್ಟು 36 ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ. ಎರಡನೇ ಪಟ್ಟಿಯಲ್ಲಿ ಮುಸ್ಲಿಂ ಸಮುದಾಯದ 22 ಅಭ್ಯರ್ಥಿಗಳಿಗೆ ಹಾಗೂ ಮೂರನೇ ಪಟ್ಟಿಯಲ್ಲಿ 24 ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ.
ಉತ್ತರ ಪ್ರದೇಶದಲ್ಲಿ ಶೇ.20ರಷ್ಟು ಮುಸ್ಲಿಂ ಮತದಾರರಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಮಾಯಾವತಿ ಅವರು ಆ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಿದ್ದಾರೆ.
ಮಾಯಾವತಿ ಅವರು ಇತ್ತೀಚಿಗಷ್ಟೇ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಪಕ್ಷ ಮುಂಬರುವ ವಿಧಾನಸಭೆ ಚುನಾವಣೆಗಾಗಿ 403 ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದೆ ಎಂದು ಹೇಳಿದ್ದರು. ಕಳೆದ ಬುಧವಾರ ಚುನಾವಣಾ ಆಯೋಗ ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಿಸುತ್ತಿದ್ದಂತೆ ಮಾಯಾವತಿ ಅವರು ಗುರುವಾರ ಒಂದನೇ ಪಟ್ಟಿ, ಶುಕ್ರವಾರ ಎರಡನೇ ಪಟ್ಟಿ ಹಾಗೂ ಇಂದು ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದಾರೆ.
SCROLL FOR NEXT