ಮದ್ರಾಸ್ ಹೈ ಕೋರ್ಟ್ (ಸಂಗ್ರಹ ಚಿತ್ರ) 
ದೇಶ

ಮುಚ್ಚಿದ ಲಕೋಟೆಯಲ್ಲಿ ಮಾಹಿತಿ ನೀಡುವುದಾಗಿ ಆಪೋಲೋ ಆಸ್ಪತ್ರೆಯಿಂದ ಹೇಳಿಕೆ

ಮಹತ್ವದ ಬೆಳವಣಿಗೆಯಲ್ಲಿ ಎಐಎಡಿಎಂಕೆ ಅಧಿನಾಯಕಿ ದಿವಂಗತ ಜಯಲಲಿತಾ ಅವರ ಸಾವಿನ ಕುರಿತಂತೆ ನಾಲ್ಕು ವಾರಗಳಲ್ಲಿ ವರದಿ ನೀಡುವಂತೆ ಅಪೋಲೋ ಆಸ್ಪತ್ರೆ ಆಡಳಿತ ಮಂಡಳಿಗೆ ಮದ್ರಾಸ್ ಹೈಕೋರ್ಟ್ ಸೋಮವಾರ...

ಚೆನ್ನೈ: ಮಹತ್ವದ ಬೆಳವಣಿಗೆಯಲ್ಲಿ ಎಐಎಡಿಎಂಕೆ ಅಧಿನಾಯಕಿ ದಿವಂಗತ ಜಯಲಲಿತಾ ಅವರ ಸಾವಿನ ಕುರಿತಂತೆ ನಾಲ್ಕು ವಾರಗಳಲ್ಲಿ ವರದಿ ನೀಡುವಂತೆ ಅಪೋಲೋ ಆಸ್ಪತ್ರೆ ಆಡಳಿತ ಮಂಡಳಿಗೆ ಮದ್ರಾಸ್ ಹೈಕೋರ್ಟ್ ಸೋಮವಾರ ಸೂಚನೆ ನೀಡಿದೆ.

ಜಯಲಲಿತಾ ಅವರ ಸಾವಿನ ಕುರಿತಂತೆ ಮೂಡಿರುವ ಶಂಕೆಗಳ ನಿವಾರಣೆಗೆ ಮದ್ರಾಸ್ ಹೈಕೋರ್ಟ್ ಕ್ರಮ ಕೈಗೊಂಡಿದ್ದು, ಜಯಲಲಿತಾ ಸಾವು ಮತ್ತು ಅದಕ್ಕೂ ಮೊದಲು ಅವರ ಅನಾರೋಗ್ಯ ಸಂಬಂಧಿ ವಿವರ ನೀಡುವಂತೆ ಮದ್ರಾಸ್ ಹೈಕೋರ್ಟ್ ಚೆನ್ನೈನ ಅಪೋಲೋ ಆಸ್ಪತ್ರೆಗೆ ಸೂಚನೆ ನೀಡಿದೆ. ಅಂತೆಯೇ ಈ ವರದಿಯನ್ನು ನಾಲ್ಕು ವಾರಗಳ ಅವಧಿಯೊಳಗೆ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಬೇಕು ಎಂದು ಹೇಳಿದೆ.

ಎಐಎಡಿಎಂಕೆ ಕಾರ್ಯಕರ್ತ ಜೋಸೆಫ್ ಎಂಬವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಜಯಲಲಿತಾ ಅವರಿಗೆ ನೀಡಿರುವ ಚಿಕಿತ್ಸೆಯ ವಿವರ ನೀಡುವಂತೆ ತಿಳಿಸಿದೆ. ಇದೇ ವೇಳೆ ಕೇಂದ್ರ ಸರಕಾರಕ್ಕೂ ನೋಟಿಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ 23ಕ್ಕೆ ನ್ಯಾಯಾಲಯ ಮುಂದೂಡಿದೆ.

ನ್ಯಾಯಾಲಯದ ಸೂಚನೆಗೆ ಚೆನ್ನೈನ ಆಪೋಲೋ ಆಸ್ಪತ್ರೆ ಆಡಳಿತ ಮಂಡಳಿ ಕೂಡ ಒಪ್ಪಿಗೆ ನೀಡಿದ್ದು, ನಾಲ್ಕು ವಾರಗಳ ಅವಧಿಯಲ್ಲಿ ವರದಿ ಸಿದ್ಧಪಡಿಸಿ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡುವುದಾಗಿ ಹೇಳಿದೆ.

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವಿನ ಕುರಿತು ಮದ್ರಾಸ್‌ ಹೈಕೋರ್ಟ್‌ ಈ ಹಿಂದೆಯೂ ಶಂಕೆ ವ್ಯಕ್ತಪಡಿಸಿತ್ತು. ಅಂತೆಯೇ ಜನರ ಮನಸ್ಸಿನಲ್ಲಿರುವ ಶಂಕೆ ಶಮನಕ್ಕೆ ಮರಣೋತ್ತರ ಪರೀಕ್ಷೆ ನಡೆಸಲು ಆದೇಶ ನೀಡುವ ಕುರಿತು ಅಭಿಪ್ರಾಯವ್ಯಕ್ತಪಡಿಸಿತ್ತು. ಆದರೆ ಮರಣೋತ್ತರ ಪರೀಕ್ಷೆ ನಿರ್ಣಯವನ್ನು ಮಾತ್ರ ಮುಖ್ಯ ನ್ಯಾಯಮೂರ್ತಿಗಳ ವಿವೇಚನಗೆ ಬಿಟ್ಟಿದ್ದು ಎಂದು ಹೇಳಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel