ದೇಶ

ಕೇರಳ ಸಿಎಂ ಕಠಿಣ ನಿಲುವು: ಪ್ರತಿಭಟನೆ ಕೈಬಿಟ್ಟ ಐಎಎಸ್ ಅಧಿಕಾರಿಗಳು

Shilpa D

ತಿರುವನಂತಪುರ: ಕೇರಳ ಐಎಎಸ್ ಅಧಿಕಾರಿಗಳು ಕೈಗೊಂಡಿದ್ದ ಮುಷ್ಕರವನ್ನು ವಾಪಸ್ ತೆಗೆದುಕೊಂಡಿದ್ದಾರೆ. ಸಿಎಂ ಪಿನರಾಯಿ ವಿಜಯನ್ ಪ್ರತಿಭಟನೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಪ್ರತಿಭಟನೆ ಹಿಂಪಡೆದಿದ್ದಾರೆ.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪೌಲ್ ಆಂಟೋನಿ ವಿರುದ್ಧ ನಡೆಸುತ್ತಿರುವ ತನಿಖೆಗೆ ವಿರೋಧ ವ್ಯಕ್ತ ಪಡಿಸಿ ಕೇರಳ ಐಎಐಎಸ್ ಅಧಿಕಾರಿಗಳು ಪ್ರತಿಭಟನೆಗೆ ಕರೆ ನೀಡಿದ್ದರು. ಆದರೆ ಸಿಎಂ ಪಿನರಾಯಿ ಆಕ್ರೋಶಕ್ಕೆ ಗುರಿಯಾಗಬಹುದೆಂಬ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ ನಂತರ  ಪ್ರತಿಭಟನೆ ಹಿಂಪಡೆದಿದ್ದಾರೆ.

ನೇಮಕಾತಿ ಹಗರಣದಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪೌಲ್ ಆಂಟೋನಿ ವಿರುದ್ಧ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ವಿಚಕ್ಷಣಾ ದಳದ ನಿರ್ದೇಶಕ ಜಾಕೋಬ್ ಥಾಮಸ್ ಅಂಟೋನಿ ವಿರುದ್ಧ ತನಿಖೆ ನಡೆಸಿದ್ದರು,. ಇದಕ್ಕೆ ಐಎಎಸ್ ಅಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಪಿರನಾಯಿ ವಿಜಯನ್, ತನಿಖೆ ವಿಷಯದಲ್ಲಿ ಸರ್ಕಾರ ಮಧ್ಯ ಪ್ರವೇಶಿಸುವುದಿಲ್ಲ, ಅಧಿಕಾರಿಗಳು ತನಿಖೆಗೆ ವಿರೋಧ ವ್ಯಕ್ತ ಪಡಿಸುವುದು ಸ್ವಾಭಾವಿಕ, ಈ ಹಿಂದೆಯೂ ಕೂಡ ಉನ್ನತ ಮಟ್ಟದ ಅಧಿಕಾರಿಗಳ ವಿರುದ್ಧ ತನಿಖೆ ನಡೆದಿದೆ. ವಿಚಾರಣೆ ನಿಷ್ಪಕ್ಷಪಾತವಾಗಿ ನಡೆಯಬೇಕು ಎಂಬ ಉದ್ದೇಶದಿಂದ ಸರ್ಕಾರ ಈ ವಿಚಾರದಲ್ಲಿ ತಲೆ ಹಾಕುವುದಿಲ್ಲ, ಜಾಕೋಬ್ ಥಾಮಸ್ ಅವರಿಗೆ ಸಂಪೂರ್ಣ ಸಹಕಾರ ನೀಡುತ್ತದೆ ಎಂದು ಅವರು ಹೇಳಿದ್ದಾರೆ. 

SCROLL FOR NEXT