ಸಂಗ್ರಹ ಚಿತ್ರ 
ದೇಶ

ಬಂಡಿಪೋರದಲ್ಲಿ ಎನ್'ಕೌಂಟರ್: ಓರ್ವ ಉಗ್ರನನ್ನು ಸದೆಬಡಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿರುವುದಾಗಿ ಮಂಗಳವಾರ ತಿಳಿದುಬಂದಿದೆ...

ಬಂಡಿಪೋರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿರುವುದಾಗಿ ಮಂಗಳವಾರ ತಿಳಿದುಬಂದಿದೆ.

ಬಂಡಿಪೋರ ಜಿಲ್ಲೆಯ ಪರ್ರೆ ಮೊಹಲ್ಲಾ ಹಜ್ಜಿನ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಮಾಹಿತಿ ತಿಳಿದುಬರುತ್ತಿದ್ದಂತೆ ಭಾರತೀಯ ಸೇನೆ ಕಾರ್ಯಾಚರಣೆಗಿಳಿದಿತ್ತು. ಈ ವೇಳೆ ಉಗ್ರರು ಸೇನೆ ಮೇಲೆ ಗುಂಡಿನ ದಾಳಿನಡೆಸಲು ಆರಂಭಿಸಿದ್ದಾರೆ.

ಕೂಡಲೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಸೇನೆ ಓರ್ವ ಉಗ್ರನನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದೆ. ಪ್ರಸ್ತುತ ಕಾರ್ಯಾಚರಣೆ ಮುಂದುವರೆಯುತ್ತಿರುವುದಾಗಿ ಮೂಲಗಳು ತಿಳಿಸಿವೆ. ದಾಳಿ ವೇಳೆ ಓರ್ವ ಯೋಧನಿಗೆ ಗಾಯವಾಗಿರುವುದಾಗಿ ವರದಿಗಳು ತಿಳಿಸಿವೆ.

ನಿನ್ನೆಯಷ್ಟೇ ಜಮ್ಮು ಜಿಲ್ಲೆಯ ಅಖ್ನೂರ್ ಪ್ರದೇಶದಲ್ಲಿರುವ ಜನರಲ್ ರಿಸರ್ವ್ ಇಂಜಿನಿಯರ್ ಫೋರ್ಸ್ (ಜಿಆರ್ ಇಎಫ್) ನೆಲೆ ಮೇಲೆ ಉಗ್ರರು ದಾಳಿ ನಡೆಸಿದ್ದರು. ದಾಳಿ ವೇಳೆ ಜಿಆರ್ ಇಎಫ್ ನಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರನ್ನು ಉಗ್ರರು ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!