ಗಾಂಧಿನಗರ: ಸೆಪ್ಟೆಂಬರ್ 16ರೊಳಗಾಗಿ ಸರಕು ಮತ್ತು ಸೇವಾ ತೆರಿಗೆ ಮಸೂದೆಯನ್ನು ಜಾರಿಗೆ ತರುವುದು ಪ್ರಮುಖವಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಬುಧವಾರ ಹೇಳಿದ್ದಾರೆ.
ಈ ಕುರಿತಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿರುವ ಅವರು, ಏಪ್ರಿಲ್ ತಿಂಗಳಿನಲ್ಲಿಯೇ ಸರಕು ಮತ್ತು ಸೇವಾ ತೆರಿಗೆಯನ್ನು ಜಾರಿ ತರಲು ನಿರ್ಧರಿಸಿದ್ದೆವು. ಇದೀಗ ಸೆಪ್ಟೆಂಬರ್ 16 ಒಳಗಾಗಿ ಸರಕು ಮತ್ತು ಸೇವಾ ತೆರಿಗೆ ಮಸೂದೆ ಜಾರಿಗೆ ತರುವುದು ಬಹುಮುಖ್ಯವಾಗಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ನೋಟು ನಿಷೇಧ ನಿರ್ಧಾರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಸರಕು ಮತ್ತು ಸೇವೆ ತೆರಿಗೆ ಮತ್ತು ನೋಟು ನಿಷೇಧ ನಿರ್ಧಾರ ದೇಶದ ಆರ್ಥಿಕ ಬೆಳವಣಿಗೆಗೆ ಸಹಾಯಕವಾಗಲಿದೆ ಎಂದು ತಿಳಿಸಿದ್ದಾರೆ.