ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಯೋಧರಿಗೆ ಕಳಪೆ ಗುಣಮಟ್ಟದ ಆಹಾರ: ಪ್ರತಿಕ್ರಿಯೆಗೆ ಪರಿಕ್ಕರ್ ನಿರಾಕರಣೆ

ದೇಶಕ್ಕಾಗಿ ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಲು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಗುರುವಾರ ನಿರಾಕರಿಸಿದ್ದಾರೆ...

ರಕ್ಷಣಾ ಸಚಿವ ಮನೋಹರ್ ಪರಿಕ್ಕರ್
Manjula VN
Updated On : 12 Jan 2017, 8:30 am

ಗಾಂಧಿನಗರ: ದೇಶಕ್ಕಾಗಿ ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಲು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಗುರುವಾರ ನಿರಾಕರಿಸಿದ್ದಾರೆ.

ಗಡಿ ಭದ್ರತಾ ಪಡೆ ಗೃಹ ಸಚಿವಾಲಯದ ಅಡಿಯಲ್ಲಿ ಬರಲಿದ್ದು, ಪ್ರಕರಣ ಸಂಬಂಧ ನಾನು ಯಾವುದೇ ಪ್ರತಿಕ್ರಿಯೆ ನೀಡಲು ಇಚ್ಛಿಸುವುದಿಲ್ಲ ಎಂದು ಪರಿಕ್ಕರ್ ಅವರು ಹೇಳಿದ್ದಾರೆ.

ಕಳೆದ ಎರಡು ವರ್ಷಗಳಿಂದಲೂ ಯೋಧರ ಸಮಸ್ಯೆಗಳ ಕುರಿತಂತೆ ರಕ್ಷಣಾ ಸಚಿವಾಲಯ ಪರಿಶೀಲನೆ ನಡೆಸುತ್ತಿದ್ದು, ಆಹಾರ ಗುಣಮಟ್ಟವನ್ನು ಸರಿಪಡಿಸಲು ಯತ್ನ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಬಿಎಸ್ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ಅವರು ಸೇನಾ ಅಧಿಕಾರಿಗಳ ವಿರುದ್ದ ಆರೋಪ ವ್ಯಕ್ತಪಡಿಸಿದ್ದರು. ಸೇನೆಯಲ್ಲಿ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ನೀಡುತ್ತಿದ್ದು, ಯೋಧರು ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆಂದು ವಿಡಿಯೋವೊಂದನ್ನು ಹರಿಬಿಟ್ಟಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಕೇಂದ್ರ ಸರ್ಕಾರ ತನಿಖೆಗೆ ಆದೇಶಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments